ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ NEET-UG ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಎನ್ ಟಿಎ
ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಗಳ ವಾದವನ್ನು ಸುಪ್ರೀಂ ಕೋರ್ಟ್ ಜುಲೈ 22 ರಂದು ಪುನರಾರಂಭಿಸಲಿದೆ.

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ಎನ್ಇಇಟಿ-ಯುಜಿ ಪರೀಕ್ಷೆಯ ಫಲಿತಾಂಶವನ್ನು ಶನಿವಾರದಂದು ಕೇಂದ್ರವಾರು ಹಾಗೂ ನಗರವಾರು ಪ್ರಕಟಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯ ಕಾರಣದಿಂದಾಗಿ ಎನ್ಇಇಟಿ-ಯುಜಿ ಪರೀಕ್ಷೆ ವಿವಾದಕ್ಕೆ ಒಳಗಾಗಿತ್ತು. ಈ ಬಗ್ಗೆ ಸಿಬಿಐ ತನಿಖೆ ನಡೆಯುತ್ತಿದ್ದು, ಶನಿವಾರ ಮಧ್ಯಾಹ್ನ ಕೇಂದ್ರವಾರು ಫಲಿತಾಂಶ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ NTA ಗೆ ಸೂಚನೆ ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಈಗ ಫಲಿತಾಂಶ ಪ್ರಕಟಗೊಂಡಿದೆ.
ಮೇ.05 ರಂದು 14 ವಿದೇಶದಲ್ಲಿರುವ ನಗರಗಳು ಸೇರಿ ಒಟ್ಟು 571 ನಗರಳ 4,750 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಇದರಲ್ಲಿ 24 ಲಕ್ಷ ಅಭ್ಯರ್ಥಿಗಳು ಭಾಗಿಯಾಗಿದ್ದರು.
ಆಕಾಂಕ್ಷಿಗಳ ಗುರುತನ್ನು ಮರೆಮಾಚುವ ಮೂಲಕ ಫಲಿತಾಂಶಗಳನ್ನು ಪ್ರಕಟಿಸಲು ನ್ಯಾಯಾಲಯವು ಆದೇಶ ನೀಡಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಕೇಂದ್ರಗಳಲ್ಲಿ ಹಾಜರಾಗುವ ಅಭ್ಯರ್ಥಿಗಳು ಬೇರೆಡೆ ಪರೀಕ್ಷೆ ಬರೆಯುವವರಿಗಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಬಯಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಪ್ರತಿಷ್ಠಿತ ಪರೀಕ್ಷೆಯಲ್ಲಿನ ಅವ್ಯವಹಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದತಿ, ಮರು ಪರೀಕ್ಷೆ ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಗಳ ವಾದವನ್ನು ಸುಪ್ರೀಂ ಕೋರ್ಟ್ ಜುಲೈ 22 ರಂದು ಪುನರಾರಂಭಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



