Pune Hit-and-Run case: ಕಾರು ಗುದ್ದಿದ ರಭಸಕ್ಕೆ 10 ಅಡಿ ಮೇಲಕ್ಕೆ ಹಾರಿದ ದಂಪತಿ; Video viral
ಪುಣೆಯ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಗುರುವಾರ ಈ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ದಂಪತಿ ಬೈಕ್ ಗೆ ವೇಗವಾಗಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ.

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಕೇಸ್ ವರದಿಯಾಗಿದ್ದು, ವೇಗವಾಗಿ ಬಂದ ಕಾರೊಂದು ಬೈಕ್ ಗೆ ಢಿಕ್ಕಿಯಾದ ಪರಿಣಾಮ ದಂಪತಿ 10 ಅಡಿ ಮೇಲಕ್ಕೆ ಹಾರಿದ ಘಟನೆ ನಡೆದಿದೆ.
ಪುಣೆಯ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಗುರುವಾರ ಈ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ದಂಪತಿ ಬೈಕ್ ಗೆ ವೇಗವಾಗಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ.
ಕಾರು ಢಿಕ್ಕಿಯಾದ ರಭಸಕ್ಕೆ ಬೈಕ್ ನಲ್ಲಿದ್ದ ದಂಪತಿ 10 ಮೇಲೆ ಹಾರಿ ಕೆಳಗೆ ಬೀಳುತ್ತಾರೆ. ಇವಿಷ್ಟೂ ವಿಡಿಯೋ ಹೆದ್ದಾರಿ ಸಮೀಪದ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ.
ದಂಪತಿಗೆ ನೆರವಿಗೆ ಧಾವಿಸಿದ ಸ್ಥಳೀಯರು
ಅಪಘಾತವಾಗುತ್ತಿದ್ದಂತೆಯೇ ಕಾರು ಚಾಲಕ ಅಲ್ಲಿಂದ ಕಾರು ಸಮೇತ ಪರಾರಿಯಾಗಿದ್ದು, ರಸ್ತೆ ಮೇಲೆ ಬಿದ್ದು ಗಾಯಗೊಂಡಿದ್ದ ದಂಪತಿಗಳನ್ನು ಸ್ಥಳೀಯರು ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂತೆಯೇ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



