ಉತ್ತರ ಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಪ್ರಧಾನಿ ಮೋದಿ, ಬಿಜೆಪಿ ನಾಯಕರ ಭೇಟಿಗೆ ಯೋಗಿ ಆದಿತ್ಯನಾಥ್ ಮುಂದು!
ಜುಲೈ 27 ರಂದು ದೆಹಲಿಯಲ್ಲಿ ನಡೆಯುವ NITI ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅಥವಾ ನಂತರ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ಮೋದಿ ಮತ್ತು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಲಖನೌ: ಉತ್ತರ ಪ್ರದೇಶದ ಬಿಜೆಪಿಯಲ್ಲಿನ ಬಿಕ್ಕಟ್ಟು ಮತ್ತು ಉಪ ಮುಖ್ಯಮಂತ್ರಿ ಕೇಶವ್ ಮೌರ್ಯ ನಡುವಿನ ಭಿನ್ನಾಭಿಪ್ರಾಯದ ನಡುವೆಯೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿರಿಯ ನಾಯಕರನ್ನು ಭೇಟಿ ಮಾಡಲು ಯೋಜಿಸಿದ್ದಾರೆ.
ಜುಲೈ 27 ರಂದು ದೆಹಲಿಯಲ್ಲಿ ನಡೆಯುವ NITI ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅಥವಾ ನಂತರ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ಮೋದಿ ಮತ್ತು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಮುಂದಿನ ವಾರ ನಡೆಯಲಿರುವ NITI ಆಯೋಗದ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವ ಯುಪಿ ಸಿಎಂ, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಿ ಯುಪಿ ಬಿಜೆಪಿಯೊಳಗಿನ ವಿದ್ಯಮಾನಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಜುಲೈ 29 ರಂದು ಲಖನೌದಲ್ಲಿ ಪ್ರಾರಂಭವಾಗಲಿರುವ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ಕೇವಲ ಎರಡು ದಿನಗಳ ಮೊದಲು ಯೋಗಿ ಆದಿತ್ಯನಾಥ್ ಅವರ ದೆಹಲಿ ಭೇಟಿ ಮಹತ್ವವನ್ನು ಪಡೆದುಕೊಂಡಿದೆ.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷ ಅನುಭವಿಸಿದ ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡುವ ಬಗ್ಗೆಯೂ ಯುಪಿ ಸಿಎಂ ಚರ್ಚಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಇದಲ್ಲದೆ, ಮುಂಬರುವ ಉಪಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಯಬಹುದು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



