ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ: NCP ಸ್ವತಂತ್ರವಾಗಿ ಸ್ಪರ್ಧೆ- ಅಜಿತ್ ಪವಾರ್
ಮುನ್ಸಿಪಲ್ ಕೌನ್ಸಿಲ್, ನಗರ ಪಂಚಾಯತ್ ಮತ್ತು ಜಿಲ್ಲಾ ಪರಿಷತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಸೇರಿವೆ.

ಪುಣೆ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ನೇತೃತ್ವದ ಎನ್‌ಸಿಪಿ ಸೇರಿದಂತೆ ಮಹಾಯುತಿ ಮೈತ್ರಿಕೂಟ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಲು ಮುಕ್ತವಾಗಿವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ ಹೇಳಿದ್ದಾರೆ.
ಪಿಂಪ್ರಿ ಚಿಂಚ್‌ವಾಡ್ ನಗರದಲ್ಲಿ ಎನ್ ಸಿಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಸ್ವತಂತ್ರ ಸ್ಪರ್ಧೆಗಳು ಕಾರ್ಯಕರ್ತರನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಯಲ್ಲಿ ನಾವು ಮಿತ್ರರಾಗಿದ್ದರೂ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಮಹಾಯುತಿ ಸದಸ್ಯರು ಸ್ವತಂತ್ರರು ಎಂದು ಅವರು ಹೇಳಿದರು.
ಮುನ್ಸಿಪಲ್ ಕೌನ್ಸಿಲ್, ನಗರ ಪಂಚಾಯತ್ ಮತ್ತು ಜಿಲ್ಲಾ ಪರಿಷತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಸೇರಿವೆ.
"ಪಿಂಪ್ರಿ ಚಿಂಚ್‌ವಾಡ್ ಎಂದರೆ ಅಜಿತ್ ಪವಾರ್ ಮತ್ತು ಅಜಿತ್ ಪವಾರ್ ಎಂದರೆ ಪಿಂಪ್ರಿ ಚಿಂಚ್‌ವಾಡ್. ಈ ಸತ್ಯವನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ" ಎಂದು ಹೇಳುವ ಮೂಲಕ ಟೌನ್‌ಶಿಪ್ ಅಭಿವೃದ್ಧಿಯ ಶ್ರೇಯಸ್ಸನ್ನು ಹೇಳಿಕೊಂಡಿದ್ದ ತನ್ನ ಚಿಕ್ಕಪ್ಪ ಶರದ್ ಪವಾರ್ ವಿರುದ್ಧ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



