ಪೂಜಾ ಖೇಡ್ಕರ್ ಪೋಷಕರು ವಿಚ್ಛೇದನ ಪಡೆದಿದ್ದರೆ ತನಿಖೆ ನಡೆಸುವಂತೆ ಪುಣೆ ಪೊಲೀಸರಿಗೆ ಕೇಂದ್ರ ಸೂಚನೆ
ಪೂಜಾ ಖೇಡ್ಕರ್ ಅವರ ಪೋಷಕರು - ತಾಯಿ ಮನೋರಮಾ ಮತ್ತು ತಂದೆ ದಿಲೀಪ್ ಅವರು ವಿಚ್ಛೇದನ ಪಡೆದಿದ್ದಾರೆಯೇ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರ ಕೇಳಿದೆ.

ಪುಣೆ: ವಿವಾದಾತ್ಮಕ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ಅಕ್ರಮವಾಗಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಒಬಿಸಿ ನಾನ್-ಕ್ರೀಮಿ ಲೇಯರ್ ಪ್ರಯೋಜನೆ ಪಡೆದಿದ್ದಾರೆ ಎಂಬ ಆರೋಪದ ನಡುವೆ ಅವರ ಪೋಷಕರ ವೈವಾಹಿಕ ಸ್ಥಿತಿಯ ಬಗ್ಗೆ ಮಾಹಿತಿ ನೀಡುವಂತೆ ಪುಣೆ ಪೊಲೀಸರಿಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಪಿಟಿಐ ಜೊತೆ ಮಾತನಾಡಿದ ಪುಣೆ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು, ಪೂಜಾ ಖೇಡ್ಕರ್ ಅವರ ಪೋಷಕರು - ತಾಯಿ ಮನೋರಮಾ ಮತ್ತು ತಂದೆ ದಿಲೀಪ್ ಅವರು ವಿಚ್ಛೇದನ ಪಡೆದಿದ್ದಾರೆಯೇ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರ ಕೇಳಿದೆ ಎಂದು ದೃಢಪಡಿಸಿದರು.
"ಪೂಜಾ ಖೇಡ್ಕರ್ ಅವರ ಪೋಷಕರು ವಿಚ್ಛೇದನ ಪಡೆದಿದ್ದಾರೆಯೇ ಎಂಬುದರ ಕುರಿತು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡುವಂತೆ ನಮಗೆ ತಿಳಿಸಲಾಗಿದೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಅವರ ಮದುವೆ/ವಿಚ್ಛೇದನದ ನೈಜ ಸ್ಥಿತಿಯನ್ನು ಪರಿಶೀಲಿಸಲು ನಮಗೆ ಸೂಚಿಸಲಾಗಿದೆ" ಎಂದು ಅಧಿಕಾರಿ ಹೇಳಿದ್ದಾರೆ.
ಭಾರತೀಯ ಆಡಳಿತ ಸೇವೆಗೆ ಸೇರಲು ಅಂಗವೈಕಲ್ಯ ಮತ್ತು ಒಬಿಸಿ ಕೋಟಾ ದುರ್ಬಳಕೆ ಮಾಡಿಕೊಂಡ ಆರೋಪದ ನಡುವೆ ಪುಣೆಯಿಂದ ವಾಶಿಮ್‌ಗೆ ವರ್ಗಾವಣೆಗೊಂಡ ಖೇಡ್ಕರ್ ಅವರ ಪ್ರೊಬೇಷನರಿ ಅವಧಿಯನ್ನು ಸ್ಥಗಿತಗೊಳಿಸಲಾಗಿದ್ದು, ವಾಪಸ್ ಅಕಾಡೆಮಿಗೆ ಮರಳುವಂತೆ ಸೂಚಿಸಲಾಗಿದೆ. ಅಲ್ಲದೆ ಅವರ ವಿರುದ್ಧ ತನಿಖೆಗೆ ಕೇಂದ್ರ ಸರ್ಕಾರ ಏಕ ಸದಸ್ಯ ಸಮಿತಿ ಸಹ ರಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



