ಜಮ್ಮು-ಕಾಶ್ಮೀರ: ಉಗ್ರರ ಒಳನುಸುಳುವಿಕೆ ಯತ್ನ ವಿಫಲ, ಓರ್ವ ಸೈನಿಕ ಹುತಾತ್ಮ
ಕೃಷ್ಣಗತಿ ಬೆಲ್ಟ್‌ನ ಬತ್ತಲ್ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರನ್ನು ಪರಿಣಾಮಕಾರಿಯಾಗಿ ಹಿಮ್ಮಟ್ಟಿಸಲಾಗಿದೆ. ಈ ವೇಳೆ ತೀವ್ರವಾದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ಸಾವನ್ನಪ್ಪಿದ್ದಾರೆ. ಉಗ್ರರ ಕಡೆಯೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಪೂಂಚ್: ಕೇಂದ್ರಾಡಳಿತ ಪ್ರದೇಶದ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಮಂಗಳವಾರ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಸೇನೆಯು ವಿಫಲಗೊಳಿಸಿದ್ದರಿಂದ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ವೈಟ್ ನೈಟ್ ಕಾರ್ಪ್ಸ್, ಬಟ್ಟಲ್ ಸೆಕ್ಟರ್ ನಲ್ಲಿ ಮುಂಜಾನೆ 3 ಗಂಟೆ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಸೇನಾ ಪಡೆಗಳು ಪರಿಣಾಮಕಾರಿಯಾಗಿ ವಿಫಲಗೊಳಿಸಿದವು. ಭಾರೀ ಗುಂಡಿನ ಚಕಮಕಿ ಸಮಯದಲ್ಲಿ, ಒಬ್ಬ ಧೈರ್ಯಶಾಲಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಹೇಳಿತ್ತು.
ಮೂಲಗಳ ಪ್ರಕಾರ, ಕೃಷ್ಣಗತಿ ಬೆಲ್ಟ್‌ನ ಬತ್ತಲ್ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರನ್ನು ಪರಿಣಾಮಕಾರಿಯಾಗಿ ಹಿಮ್ಮಟ್ಟಿಸಲಾಗಿದೆ. ಈ ವೇಳೆ ತೀವ್ರವಾದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ಸಾವನ್ನಪ್ಪಿದ್ದಾರೆ. ಉಗ್ರರ ಕಡೆಯೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಮರಣೋತ್ತರ ಪರೀಕ್ಷೆ ನಡೆಸಿ ಯೋಧನ ದೇಹವನ್ನು ಸೇನೆಗೆ ಹಸ್ತಾಂತರಿಸಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚಿನ ತಿಂಗಳುಗಳಲ್ಲಿ ಜಮ್ಮುವಿನಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿದ್ದು, ಈ ಪ್ರದೇಶದಲ್ಲಿ ಉಗ್ರಗಾಮಿತ್ವದ ಪುನರುಜ್ಜೀವನದ ಬಗ್ಗೆ ಆತಂಕವನ್ನು ಹೆಚ್ಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



