ದೇಶ

ಅಂಜಲಿ ಬಿರ್ಲಾ ವಿರುದ್ಧದ ಫೇಕ್‌ ನ್ಯೂಸ್‌ 24 ಗಂಟೆಯೊಳಗೆ ಡಿಲೀಟ್‌ ಮಾಡಿ; ಗೂಗಲ್, ಎಕ್ಸ್ ಗೆ ಹೈಕೋರ್ಟ್ ಸೂಚನೆ

ಮಧ್ಯಂತರ ಆದೇಶ ನೀಡಿದ ನ್ಯಾಯಮೂರ್ತಿ ನವೀನ್ ಚಾವ್ಲಾ 24 ಗಂಟೆಗಳ ಒಳಗೆ ಹೇಳಿಕೆಗಳನ್ನು ತೆಗೆದುಹಾಕುವಂತೆ ಎಕ್ಸ್ (ಟ್ವಿಟರ್) ಮತ್ತು ಗೂಗಲ್‌ಗೆ ಸೂಚಿಸಿದರು.

ಅಂಜಲಿ ಬಿರ್ಲಾ ವಿರುದ್ಧದ ಫೇಕ್‌ ನ್ಯೂಸ್‌ 24 ಗಂಟೆಯೊಳಗೆ ಡಿಲೀಟ್‌ ಮಾಡಿ; ಗೂಗಲ್, ಎಕ್ಸ್ ಗೆ ಹೈಕೋರ್ಟ್ ಸೂಚನೆ
ಅಂಜಲಿ ಬಿರ್ಲಾ
Published On :

ನವದೆಹಲಿ: ಪ್ರಭಾವಿಯಾಗಿರುವ ತನ್ನ ತಂದೆಯ ಕಾರಣದಿಂದಾಗಿ ಮೊದಲ ಪ್ರಯತ್ನದಲ್ಲಿಯೇ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆಯಲ್ಲಿ ಭಾರತೀಯ ರೈಲ್ವೆ ಕಾರ್ಮಿಕರ ಸೇವೆ (ಐಆರ್‌ಪಿಎಸ್‌) ಅಧಿಕಾರಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಬಿರ್ಲಾ ತೇರ್ಗಡೆಯಾಗಿದ್ದಾರೆ ಎಂದು ಆರೋಪಿಸಿದ್ದ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್‌ ಆದೇಶಿಸಿದೆ.

ಮಧ್ಯಂತರ ಆದೇಶ ನೀಡಿದ ನ್ಯಾಯಮೂರ್ತಿ ನವೀನ್ ಚಾವ್ಲಾ 24 ಗಂಟೆಗಳ ಒಳಗೆ ಹೇಳಿಕೆಗಳನ್ನು ತೆಗೆದುಹಾಕುವಂತೆ ಎಕ್ಸ್ (ಟ್ವಿಟರ್) ಮತ್ತು ಗೂಗಲ್‌ಗೆ ಸೂಚಿಸಿದರು. ಪ್ರಸ್ತುತ ಐಆರ್‌ಪಿಎಸ್ ಅಧಿಕಾರಿಯಾಗಿ ಕೆಲಸ ಮಾಡುತ್ತಿರುವ ಅಂಜಲಿ ಬಿರ್ಲಾ ಅವರು ಅವರ ತಂದೆಯ ಪ್ರಭಾವದಿಂದಾಗಿ ಮೊದಲ ಪ್ರಯತ್ನದಲ್ಲೇ ಐಎಎಸ್ ಪರೀಕ್ಷೆ ಪಾಸು ಮಾಡಿದ್ದರು ಎಂಬ ಹಲವು ವರದಿಗಳು ಸಾಮಾಜಿಕ ಜಾಲತಾಣಗಳು ಸೇರಿದಂತೆ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿದ್ದವು.

ಇದಾದ ನಂತರ ಕೇಂದ್ರ ಲೋಕಸೇವಾ ಆಯೋಗವೂ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿ, ಅಂಜಲಿ ಬಿರ್ಲಾ 2019ರಲ್ಲಿ ಯುಪಿಎಸ್‌ ಪರೀಕ್ಷೆ ಬರೆದಿದ್ದು, 2020ರಲ್ಲಿ ಸೇವೆಗೆ ಆಯ್ಕೆಯಾಗಿದ್ದರು ಎಂದು ಹೇಳಿತ್ತು. ಇದರ ಹೊರತಾಗಿಯೂ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಮಾನಹಾನಿಕರ ನಕಲಿ ವರದಿಗಳು ಹರಿದಾಡುತ್ತಲೇ ಇದ್ದವು.ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ಮಾನ ಹಾನಿ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.