ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ, ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಮತ್ತು ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಗುರುವಾರ ವಿಸ್ತರಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿಯನ್ನು ಜುಲೈ 31 ರವರೆಗೆ ವಿಸ್ತರಿಸಿದರೆ, ಸಿಬಿಐ ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನವನ್ನು ನ್ಯಾಯಾಧೀಶರು ಜುಲೈ 31 ರವರೆಗೆ ವಿಸ್ತರಿಸಿದರು.
ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇಡಿ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಈ ಹಿಂದೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು, ಆದರೆ, ಪ್ರಕರಣದಲ್ಲಿ ಜಾಮೀನು ಬಾಂಡ್ ಸಲ್ಲಿಸದ ಕಾರಣ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.
ಕೇಂದ್ರೀಯ ತನಿಖಾ ದಳ (CBI) ಪ್ರಕರಣದಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


