ದೇಶ

ಕಾಶ್ಮೀರ: ಕಮರಿಗೆ ಬಿದ್ದ ಕಾರು, ಐದು ಮಕ್ಕಳು ಸೇರಿ ಒಂದೇ ಕುಟುಂಬದ ಎಂಟು ಮಂದಿ ಸಾವು

ಕಾರಿನಲ್ಲಿದ್ದ ಒಬ್ಬ ಪೊಲೀಸ್, ಇಬ್ಬರು ಮಹಿಳೆಯರು ಮತ್ತು 6 ರಿಂದ 16 ವರ್ಷದೊಳಗಿನ ಐದು ಮಕ್ಕಳು ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಕಾಶ್ಮೀರ: ಕಮರಿಗೆ ಬಿದ್ದ ಕಾರು, ಐದು ಮಕ್ಕಳು ಸೇರಿ ಒಂದೇ ಕುಟುಂಬದ ಎಂಟು ಮಂದಿ ಸಾವು
ಸಾಂದರ್ಭಿಕ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಐದು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರಿನಲ್ಲಿದ್ದ ಒಬ್ಬ ಪೊಲೀಸ್, ಇಬ್ಬರು ಮಹಿಳೆಯರು ಮತ್ತು 6 ರಿಂದ 16 ವರ್ಷದೊಳಗಿನ ಐದು ಮಕ್ಕಳು ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಮೃತರು ಕಿಶ್ತ್ವಾರ್‌ನಿಂದ ಸಿಂಥನ್ ಟಾಪ್ ಮೂಲಕ ಮಾರ್ವಾ ಕಡೆಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ರಸ್ತೆಯಿಂದ ಸ್ಕಿಡ್ ಆಗಿ ದಕ್ಸಮ್‌ನಲ್ಲಿ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದೇ ಕುಟುಂಬದ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.