ದೆಹಲಿಯಲ್ಲಿ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು: ಎಸ್‌ಯುವಿ ಚಾಲಕ ಸೇರಿ ಮತ್ತೆ ಐವರ ಬಂಧನ
ಆರೋಪಿಗಳ ಗುರುತು ಮತ್ತು ಅವರ ಪಾತ್ರವನ್ನು ಪೊಲೀಸರು ಇನ್ನೂ ಬಹಿರಂಗಪಡಿಸಬೇಕಾಗಿದೆ.

ನವದೆಹಲಿ: ದೆಹಲಿ ಕೋಚಿಂಗ್ ಸೆಂಟರ್ ನಲ್ಲಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಾವೃತವಾದ ರಸ್ತೆಯಲ್ಲಿ ವಾಹನ ಚಲಾಯಿಸುವ ಮೂಲಕ ರಾವ್ಸ್ ಸಿವಿಲ್ ಸರ್ವಿಸ್ ಕೋಚಿಂಗ್ ಇನ್‌ಸ್ಟಿಟ್ಯೂಟ್ ಗೇಟ್‌ಗೆ ಹಾನಿ ಮಾಡಿದ ಆರೋಪದ ಮೇಲೆ ಎಸ್ ಯುವಿ ಚಾಲಕ ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಆರೋಪಿಗಳ ಗುರುತು ಮತ್ತು ಅವರ ಪಾತ್ರವನ್ನು ಪೊಲೀಸರು ಇನ್ನೂ ಬಹಿರಂಗಪಡಿಸಬೇಕಾಗಿದೆ.
ಕಳೆದ ಶನಿವಾರ ಬೆಳಗ್ಗೆ ಸುರಿದ ಭಾರೀ ಮಳೆಯಿಂದ ಮಧ್ಯ ದೆಹಲಿಯ ಯುಪಿಎಸ್ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಗೆ ನೀರು ನುಗ್ಗಿದ ಪರಿಣಾಮ 20 ವರ್ಷದ ಮೂವರು ಯುವ ಐಎಎಸ್ ಆಕಾಂಕ್ಷಿಗಳು ಸಾವನ್ನಪ್ಪಿದ್ದರು.
ಮೂವರು ಮೃತರನ್ನು ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಶ್ರೇಯಾ ಯಾದವ್, ತೆಲಂಗಾಣದ ತಾನ್ಯಾ ಸೋನಿ ಮತ್ತು ಕೇರಳದ ಎರ್ನಾಕುಲಂನ ನವೀನ್ ಡಾಲ್ವಿನ್ ಎಂದು ಗುರುತಿಸಲಾಗಿದೆ.
ಕೋಚಿಂಗ್ ಇನ್ಸ್ಟಿಟ್ಯೂಟ್, ನೆಲಮಾಳಿಗೆಯ ಪ್ರದೇಶದಲ್ಲಿ ಗ್ರಂಥಾಲಯವನ್ನು "ಕಾನೂನುಬಾಹಿರವಾಗಿ" ನಡೆಸುತ್ತಿದೆ ಎಂದು ಪ್ರಾಥಮಿಕ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ಆರೋಪಿಗಳ ವಿರುದ್ಧ ನರಹತ್ಯೆ ಸೇರಿದಂತೆ BNS ನ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣನ್ನು ದಾಖಲಿಸಲಾಗಿದೆ ಮತ್ತು ಆರೋಪಿ ಮಾಲೀಕರನ್ನು ಹಾಗೂ ಸಂಸ್ಥೆಯ ಸಂಯೋಜಕರನ್ನು ಭಾನುವಾರ ಬಂಧಿಸಲಾಗಿದೆ.
ಇಂದು ಎಸ್‌ಯುವಿ ಚಾಲಕ ಹಾಗೂ ನೆಲಮಾಳಿಗೆಯ ಮಾಲೀಕ ಸೇರಿದಂತೆ ಮತ್ತೆ ಐವರನ್ನು ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗದೆ ಎಂದು ಡಿಸಿಪಿ (ಕೇಂದ್ರ) ಎಂ ಹರ್ಷವರ್ಧನ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



