ವಿನಾಶಕಾರಿ ಭೂಕುಸಿತ: ನಾಳೆ ವಯನಾಡಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಭೇಟಿ
ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಬುಧವಾರ 170ಕ್ಕೆ ಏರಿಕೆಯಾಗಿದೆ. 225 ಜನರು ನಾಪತ್ತೆ ಕುರಿತು ವರದಿಯಾಗಿದೆ.

ವಯನಾಡು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಭೂಕುಸಿತ ಪೀಡಿತ ವಯನಾಡ್‌ಗೆ ನಾಳೆ ಭೇಟಿ ನೀಡಲಿದ್ದು, ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಹಲವಾರು ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಬುಧವಾರ ಬೆಳಿಗ್ಗೆ ವಯನಾಡ್‌ಗೆ ಭೇಟಿ ನೀಡಬೇಕಿತ್ತು ಆದರೆ ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಬರುವುದು ಬೇಡ ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಅವರು ಭೇಟಿಯನ್ನು ಮುಂದೂಡಿದ್ದಾರೆ.
ಇವರಿಬ್ಬರೂ ನಾಳೆ ಮೆಪ್ಪಾಡಿಯ ಸರ್ಕಾರಿ ಪ್ರೌಢ ಶಾಲೆ ಮತ್ತು ಸೇಂಟ್ ಜೋಸೆಫ್ ಶಾಲೆಯಲ್ಲಿರುವ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮೆಪ್ಪಾಡಿಯ ಡಾ ಮೂಪನ್ಸ್ ಮೆಡಿಕಲ್ ಕಾಲೇಜಿಗೂ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಬುಧವಾರ 170ಕ್ಕೆ ಏರಿಕೆಯಾಗಿದೆ. 225 ಜನರು ನಾಪತ್ತೆ ಕುರಿತು ವರದಿಯಾಗಿದೆ. ನೂರಾರು ಜನರು ಗಾಯಗೊಂಡಿದ್ದು, ಸಾವಿರಾರು ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. 300 ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ನಾಶವಾಗಿರುವುದಾಗಿ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



