ದೇಶ

ಮಿಜೋರಾಂ: ನಿರಂತರ ಮಳೆ, ಭೂಕುಸಿತ; ಮೃತರ ಸಂಖ್ಯೆ 29ಕ್ಕೆ ಏರಿಕೆ!

ಮಿಜೋರಾಂನ ಐಜ್ವಾಲ್, ಕೊಲಾಸಿಬ್ ಮತ್ತಿತರ ಜಿಲ್ಲೆಯಲ್ಲಿ ನಿರಂತರ ಮಳೆ, ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಿಜೋರಾಂ: ನಿರಂತರ ಮಳೆ, ಭೂಕುಸಿತ; ಮೃತರ ಸಂಖ್ಯೆ 29ಕ್ಕೆ ಏರಿಕೆ!
ರಕ್ಷಣಾ ಕಾರ್ಯಾಚರಣೆ ಚಿತ್ರ
Published On :

ಐಜ್ವಾಲ್: ಮಿಜೋರಾಂನ ಐಜ್ವಾಲ್, ಕೊಲಾಸಿಬ್ ಮತ್ತಿತರ ಜಿಲ್ಲೆಯಲ್ಲಿ ನಿರಂತರ ಮಳೆ, ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಲಾಸಿಬ್ ಜಿಲ್ಲೆಯ ಟ್ಲಾಂಗ್ ನದಿಯಲ್ಲಿ 34 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಮಂಗಳವಾರ ಐಜ್ವಾಲ್ ಜಿಲ್ಲೆಯ ಐಬಾವ್ಕ್ ಗ್ರಾಮದಲ್ಲಿ ಭೂಕುಸಿತದಿಂದ ಮಹಿಳೆ ಮತ್ತು ಆಕೆಯ ಪತಿ ನಾಪತ್ತೆಯಾಗಿದ್ದರು.

ಶುಕ್ರವಾರ ಅಸ್ಸಾಂ ಗಡಿಯಲ್ಲಿರುವ ಕೊಲಾಸಿಬ್ ಜಿಲ್ಲೆಯ ಹೊರ್ಟೋಕಿ ಗ್ರಾಮದ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಆಕೆಯ ದೇಹವನ್ನು ನದಿಯಿಂದ ಹೊರತೆಗೆದ ನಂತರ ಕೌನ್ಪುಯಿಗೆ ಕೊಂಡೊಯ್ಯಲಾಯಿತು. ಅಲ್ಲಿ ಆಕೆಯ ಕುಟುಂಬ ಸದಸ್ಯರು ಆಕೆಯ ಗುರುತನ್ನು ದೃಢಪಡಿಸಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಾಪತ್ತೆಯಾಗಿರುವ ಇತರ ಐವರ ಹುಡುಕಾಟ ನಡೆಯುತ್ತಿದೆ. ಮಂಗಳವಾರ ಐಜ್ವಾಲ್ ಜಿಲ್ಲೆಯ ಅನೇಕ ಕಡೆ ಸಂಭವಿಸಿದ ಭೂಕುಸಿತದಲ್ಲಿ 21 ಮಂದಿ ಸ್ಥಳೀಯರು,8 ಮಂದಿ ಹೊರ ರಾಜ್ಯದವರು ಮೃತಪಟ್ಟಿದ್ದರು. ಮುಖ್ಯಮಂತ್ರಿ ಲಾಲ್ದುಹೋಮ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ರೆಮಲ್ ಚಂಡಮಾರುತದಿಂದ ಉಂಟಾದ ಮಳೆಯಿಂದ ಉಂಟಾಗುವ ಅನಾಹುತಗಳನ್ನು ನಿಭಾಯಿಸಲು ಸರ್ಕಾರ 15 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದಾಗಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.