NHAI ನಿಂದ ಹೆದ್ದಾರಿಗಳ ಟೋಲ್ ಶೇ.5 ರಷ್ಟು ಏರಿಕೆ: ನಾಳೆಯಿಂದಲೇ ಪರಿಷ್ಕೃತ ದರ ಜಾರಿ
ಎಕ್ಸ್ ಪ್ರೆಸ್ ವೇ ಗಳನ್ನು ಬಳಕೆ ಮಾಡುವ ವಾಹನ ಸವಾರರು ನಾಳೆಯಿಂದ ಟೋಲ್ ಗಳಲ್ಲಿ ಹೆಚ್ಚಿನ ದರ ನೀಡಬೇಕಾಗುತ್ತದೆ.

ನವದೆಹಲಿ: ಎಕ್ಸ್ ಪ್ರೆಸ್ ವೇ ಗಳನ್ನು ಬಳಕೆ ಮಾಡುವ ವಾಹನ ಸವಾರರು ನಾಳೆಯಿಂದ ಟೋಲ್ ಗಳಲ್ಲಿ ಹೆಚ್ಚಿನ ದರ ನೀಡಬೇಕಾಗುತ್ತದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೇಶಾದ್ಯಂತ ಹೆದ್ದಾರಿಗಳ ಟೋಲ್ ದರವನ್ನು ಶೇ.5 ರಷ್ಟು ಏರಿಕೆ ಮಾಡಿದೆ. ಟೋಲ್ ದರ ವಾರ್ಷಿಕ ಶೇ.5 ರಷ್ಟು ಹೆಚ್ಚಾಗುವುದು ವಾಡಿಕೆ. ಏ.1 ರಿಂದ ಪರಿಷ್ಕೃತ ದರ ಜಾರಿಯಾಗಬೇಕಿತ್ತು. ಆದರೆ ಲೋಕಸಭಾ ಚುನಾವಣೆಯ ಕಾರಣದಿಂದಾಗಿ ಪರಿಷ್ಕೃತ ದರ ವಿಳಂಬವಾಗಿತ್ತು.
03.06.2024 ರಿಂದ ಪರಿಷ್ಕೃತ ದರ ಜಾರಿಯಾಗಲಿದೆ ಎಂದು NHAI ನ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸಿಪಿಐ ಆಧಾರಿತ ಹಣದುಬ್ಬರಕ್ಕೆ ಅನುಗುಣವಾಗಿ NHAI ದರ ಪರಿಷ್ಕರಣೆಯಾಗುತ್ತಿರುತ್ತದೆ.
ರಾಷ್ಟ್ರೀಯ ಹೆದ್ದಾರಿ ನೆಟ್‌ವರ್ಕ್‌ನಲ್ಲಿ ಸುಮಾರು 855 ಬಳಕೆದಾರರ ಶುಲ್ಕ ಪ್ಲಾಜಾಗಳಿದ್ದು, ಇವುಗಳ ಮೇಲೆ ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳು ಮತ್ತು ಸಂಗ್ರಹಣೆ) ನಿಯಮಗಳು, 2008 ರ ಪ್ರಕಾರ ಬಳಕೆದಾರರ ಶುಲ್ಕವನ್ನು ವಿಧಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



