ಚುನಾವಣಾ ಫಲಿತಾಂಶದ ಕುರಿತು ಕಾರ್ಯತಂತ್ರ ರೂಪಿಸಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಭೆ
ಲೋಕಸಭೆ ಚುನಾವಣೆಗೆ ಮತದಾನ ಮುಗಿದ ಒಂದು ದಿನದ ನಂತರ ಮತ್ತು ಚುನಾವಣೋತ್ತರ ಸಮೀಕ್ಷೆಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ಬೆಳಗ್ಗೆ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ತಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನವದೆಹಲಿ: ಲೋಕಸಭೆ ಚುನಾವಣೆಗೆ ಮತದಾನ ಮುಗಿದ ಒಂದು ದಿನದ ನಂತರ ಮತ್ತು ಚುನಾವಣೋತ್ತರ ಸಮೀಕ್ಷೆಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ಬೆಳಗ್ಗೆ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ತಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬೆಳಗ್ಗೆ 11 ಗಂಟೆಗೆ ನಡೆಯಲಿರುವ ವರ್ಚುಯಲ್ ಸಭೆಯ ನಂತರ, ಮಧ್ಯಾಹ್ನ 1 ಗಂಟೆಗೆ ದೇಶದಾದ್ಯಂತ ಪ್ರಮುಖ ಕಾಂಗ್ರೆಸ್ ನಾಯಕರೊಂದಿಗೆ ಖರ್ಗೆ ಮತ್ತು ಗಾಂಧಿ ವರ್ಚುವಲ್ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಜೂನ್ 4 ರಂದು ಮತ ಎಣಿಕೆಯ ದಿನದ ಮೌಲ್ಯಮಾಪನ ಮತ್ತು ಸಿದ್ಧತೆಗಳ ಬಗ್ಗೆ ಚರ್ಚಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ಮತ್ತು ಪಕ್ಷದ ಇತರ ನಾಯಕರು ಸಭೆ ಸೇರುವ ನಿರೀಕ್ಷೆಯಿದೆ. ಮಧ್ಯಾಹ್ನ 1 ಗಂಟೆಗೆ ನಡೆಯುವ ಸಭೆ ನೇರಪ್ರಸಾರವಾಗಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಪ್ರತಿಪಕ್ಷಗಳ ನೇತೃತ್ವದ ಇಂಡಿಯಾ ಮೈತ್ರಿಕೂಟದ ಸಭೆಯ ನೆರಳಿನಲ್ಲೇ ಈ ಸಭೆಯು ನಡೆಯಲಿದೆ. ಕಾಂಗ್ರೆಸ್, ಸಮಾಜವಾದಿ ಪಕ್ಷ, ಸಿಪಿಐ-ಎಂ, ಸಿಪಿಐ, ಡಿಎಂಕೆ, ಜೆಎಂಎಂ, ಎಎಪಿ, ಆರ್ಜೆಡಿ, ಶಿವಸೇನೆ (ಯುಬಿಟಿ), ಮತ್ತು ಎನ್ಸಿಪಿ (ಶರದ್ ಪವಾರ್) ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ನಡೆಸಿದರು.
543 ಸದಸ್ಯ ಬಲದ ಲೋಕಸಭೆಗೆ ಸಿಕ್ಕಿಂ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆಗಳ ಜೊತೆಗೆ ಮತದಾನ ನಡೆದಿದೆ. ಏಳು ಹಂತಗಳಲ್ಲಿ ನಡೆದ ಸುದೀರ್ಘ ಅವಧಿಯ ಮತದಾನ ಪ್ರಕ್ರಿಯೆ ಶನಿವಾರ ಮುಕ್ತಾಯಗೊಂಡಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವು ಲೋಕಸಭೆ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ನಾಯಕರು ಹೇಳಿರುವ "400 ಪಾರ್" ಗುರಿಯನ್ನು ತಲುಪಬಹುದು ಎಂದು ಕೆಲವು ಎಕ್ಸಿಟ್ ಪೋಲ್ಗಳು ಭವಿಷ್ಯ ನುಡಿದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


