ಮಧ್ಯಪ್ರದೇಶ: ಟ್ರ್ಯಾಕ್ಟರ್ ಪಲ್ಟಿಯಾಗಿ 13 ಮಂದಿ ಸಾವು, ಹಲವರಿಗೆ ಗಾಯ
ಮಧ್ಯಪ್ರದೇಶದ ರಾಜ್‌ಗಢದಲ್ಲಿ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ ಗಢ: ಮಧ್ಯಪ್ರದೇಶದ ರಾಜ್‌ಗಢದಲ್ಲಿ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ. ರಾಜ್‌ಗಢ್‌ನ ಪಿಪ್ಲೋಡಿಯಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಮದುವೆ ಮೆರವಣಿಗೆ ವೇಳೆಯಲ್ಲಿ ನಡೆದ ಘಟನೆಯಲ್ಲಿ ಒಟ್ಟು 15 ಜನರು ಗಾಯಗೊಂಡಿದ್ದಾರೆ.
ಮೆರವಣಿಗೆ ರಾಜಸ್ಥಾನದ ಮೋತಿಪುರದಿಂದ ಕುಲಂಪುರಕ್ಕೆ ತೆರಳುತ್ತಿತ್ತು ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಚಿವ ನಾರಾಯಣ್ ಸಿಂಗ್ ಪನ್ವಾರ್ ಸ್ಥಳಕ್ಕೆ ಭೇಟಿ ನೀಡಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
"ರಾಜಸ್ಥಾನ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಅಲ್ಲಿನ ಪೊಲೀಸರು ಕೂಡ ಸ್ಥಳಕ್ಕೆ ತಲುಪಿದ್ದಾರೆ. ರಾಜ್‌ಗಢದ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳನ್ನು ಭೋಪಾಲ್‌ಗೆ ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅನೇಕ ಜನರ ಸಾವಿನ ಸುದ್ದಿ ತುಂಬಾ ದುಃಖಕರವಾಗಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



