ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಭದ್ರತಾ ಪಡೆಗಳು, ಉಗ್ರರ ನಡುವೆ ಗುಂಡಿನ ಚಕಮಕಿ; ವಿಡಿಯೋ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ಪ್ರಗತಿಯಲ್ಲಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ಪ್ರಗತಿಯಲ್ಲಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ನಿಹಾಮಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಗ್ರರು ಗುಂಡು ಹಾರಿಸಿದ್ದರಿಂದ ಪ್ರತಿದಾಳಿ ನಡೆಸಲಾಗಿದೆ. ಗುಂಡಿನ ಚಕಮಕಿ ಮುಂದುವರೆದಿದೆ.ಆದರೆ ಇದುವರೆಗೆ ಎರಡೂ ಕಡೆಯಿಂದ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



