SKM ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆ
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ) ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆಯಾಗಿದ್ದು, ಎರಡನೇ ಬಾರಿ ಸಿಕ್ಕಿಂ ಮುಖ್ಯಮಂತ್ರಿಯಾಗಿ ಶೀಘ್ರದಲ್ಲೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಗ್ಯಾಂಗ್‌ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ) ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆಯಾಗಿದ್ದು, ಎರಡನೇ ಬಾರಿ ಸಿಕ್ಕಿಂ ಮುಖ್ಯಮಂತ್ರಿಯಾಗಿ ಶೀಘ್ರದಲ್ಲೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಭಾನುವಾರ ರಾತ್ರಿ ಸಿಎಂ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಎಲ್ಲ 31 ಶಾಸಕರು ಹಾಜರಿದ್ದರು.
ಸಭೆಯಲ್ಲಿ, ಎಸ್‌ಕೆಎಂ ಪ್ರಧಾನ ಕಾರ್ಯದರ್ಶಿ ಅರುಣ್ ಉಪ್ರೇತಿ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಸಿಎಂ ತಮಾಂಗ್ ಅವರ ಹೆಸರನ್ನು ಪ್ರಸ್ತಾಪಿಸಿದರು ಮತ್ತು ಅದನ್ನು ಪಕ್ಷದ ಶಾಸಕಿ ಸೋನಮ್ ಲಾಮಾ ಅವರು ಅನುಮೋದಿಸಿದರು.
ನಂತರ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಎಸ್ ಕೆಎಂ ಪ್ರಕಟಣೆಯಲ್ಲಿ ತಿಳಿಸಿದೆ.
ಪಕ್ಷದ ನಾಯಕರು ತಮಾಂಗ್ ಅವರ ಆಯ್ಕೆಗೆ ಅಭಿನಂದನೆ ಸಲ್ಲಿಸಿದರು ಮತ್ತು ಅವರ ನಾಯಕತ್ವದಲ್ಲಿ ಸಮರ್ಪಣಾಭಾವದಿಂದ ಕೆಲಸ ಮಾಡುವುದಾಗಿ ಪ್ರತಿಜ್ಞೆ ಮಾಡಿದರು ಎಂದು ಪ್ರಕಟಣೆ ಹೇಳಿದೆ.
ಹಿಮಾಲಯ ರಾಜ್ಯ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(SKM) 32 ಸದಸ್ಯ ಬಲದ ವಿಧಾನಸಭೆಯಲ್ಲಿ 31 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಪ್ರತಿಪಕ್ಷ ಎಸ್‌ಡಿಎಫ್ ಕೇವಲ ಒಂದು ಸ್ಥಾನವನ್ನು ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



