ರಾಜ್ಯಪಾಲರನ್ನು ಭೇಟಿಯಾದ ಪ್ರೇಮ್ ಸಿಂಗ್ ತಮಾಂಗ್, ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ
ಎಸ್‌ಕೆಎಂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪ್ರೇಮ್ ಸಿಂಗ್ ತಮಾಂಗ್ ಅವರು ಸೋಮವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಗ್ಯಾಂಗ್‌ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ)ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪ್ರೇಮ್ ಸಿಂಗ್ ತಮಾಂಗ್ ಅವರು ಸೋಮವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಭಾನುವಾರ ರಾತ್ರಿ ಸಿಎಂ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಸ್‌ಕೆಎಂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಪ್ರೇಮ್ ಸಿಂಗ್ ತಮಾಂಗ್ ಅವರು ಇಂದು ಪಕ್ಷದ ನೂತನ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ರಾಜ್ಯಪಾಲರು ಎಲ್ಲಾ ಶಾಸಕರಿಗೆ ಅಭಿನಂದಿಸಿ ಶುಭ ಹಾರೈಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡನೇ ಬಾರಿ ಸಿಕ್ಕಿಂ ಮುಖ್ಯಮಂತ್ರಿಯಾಗುತ್ತಿರುವ ಪ್ರೇಮ್ ಸಿಂಗ್ ತಮಾಂಗ್ ಅವರು ಯಾವಾಗ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂಬುದು ತಕ್ಷಣಕ್ಕೆ ತಿಳಿದು ಬಂದಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಏಪ್ರಿಲ್ 18 ರಂದು ನಡೆದ ಸಿಕ್ಕಿಂ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(SKM) 32 ಸದಸ್ಯ ಬಲದ ವಿಧಾನಸಭೆಯಲ್ಲಿ 31 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಪ್ರತಿಪಕ್ಷ ಎಸ್‌ಡಿಎಫ್ ಕೇವಲ ಒಂದು ಸ್ಥಾನವನ್ನು ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



