ದೇಶ

Election Results 2024 Live Updates: ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ ಮೋದಿ 57,740 ಮತಗಳ ಮುನ್ನಡೆ..!

ಪ್ರಧಾನಿ ಮೋದಿ ಸ್ಪರ್ಧಿಸಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ ಮೋದಿ ಅವರು 57,740 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Election Results 2024 Live Updates: ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ ಮೋದಿ 57,740 ಮತಗಳ ಮುನ್ನಡೆ..!
ಪ್ರಧಾನಿ ಮೋದಿ
Published On :

ನವದೆಹಲಿ: ಪ್ರಧಾನಿ ಮೋದಿ ಸ್ಪರ್ಧಿಸಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ ಮೋದಿ ಅವರು 57,740 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಅಂಚೆ ಮತ ಎಣಿಕೆ ಆರಂಭವಾದಗಿನಿಂದಲೂ ಅಜಯ್ ರೈ ಮುನ್ನಡೆ ಕಾಯ್ದುಕೊಂಡಿದ್ದರು. ಸುಮಾರು 4998 ಮತಗಳ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಇದೀಗ ಹಿನ್ನಡೆ ಅನುಭವಿಸಿದ್ದಾರೆ.

ಸದ್ಯ ಪ್ರಧಾನಿ ಮೋದಿ ಅವರು 1,95,502 ಮತಗಳನ್ನು ಪಡೆದರೆ, ಕಾಂಗ್ರೆಸ್‍ನ ಅಜಯ್ ರಾಯ್ 1,34,251 ಮತಗಳನ್ನು ಪಡೆದಿದ್ದಾರೆ. ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ ಬಿಜೆಪಿ 35, ಎಸ್‍ಪಿ 34, ಕಾಂಗ್ರೆಸ್ 8, ಆರ್‍ಎಲ್‍ಡಿ 2 ಹಾಗೂ ಪಕ್ಷೇತರ ಅಭ್ಯರ್ಥಿ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಉತ್ತರಪ್ರದೇಶದಲ್ಲಿ ವಾರಣಾಸಿ, ರಾಯ್ ಬರೇಲಿ, ಅಮೇಥಿ, ಕನ್ನೌಜ್, ಮೈನ್‌ಪುರಿ, ಅಜಮ್‌ಗಢ, ಘಾಜಿಯಾಬಾದ್, ಮೀರತ್, ಫೈಜಾಬಾದ್, ಮಥುರಾ, ಗೌತಮ್ ಬುದ್ಧ ನಗರ, ಕಾನ್ಪುರ, ಗೋರಖ್‌ಪುರ ಗಮನ ಸೆಳೆದಿರುವ ಪ್ರಮುಖ ಕ್ಷೇತ್ರಗಳಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.