ಲೋಕಸಭೆ ಚುನಾವಣೆ ಫಲಿತಾಂಶ: ಗಾಂಧಿನಗರದಲ್ಲಿ 7 ಲಕ್ಷ ಮತಗಳ ಅಂತರದಿಂದ ಅಮಿತ್ ಶಾ ಗೆಲುವು
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರದಲ್ಲಿ 7 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಗಾಂಧಿನಗರ: ಲೋಕಸಭೆ ಚುನಾವಣೆಯ ಫಲಿತಾಂಶ ಅಂತಿಮ ಘಟ್ಟ ತಲುಪುತ್ತಿದ್ದು, ಭಾರತೀಯ ಜನತಾ ಪಕ್ಷದ(ಬಿಜೆಪಿ) ಹಿರಿಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರದಲ್ಲಿ 7 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರತಿಸ್ಪರ್ಧಿ ಸೋನಾಲ್ ಪಟೇಲ್ ಅವರ ವಿರುದ್ಧ ಅಮಿತ್ ಶಾ ಗೆಲುವು ಸಾಧಿಸಿದ್ದಾರೆ. ರಾಜ್ಯದ 25 ಲೋಕಸಭಾ ಕ್ಷೇತ್ರಗಳಿಗೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 23 ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
2019 ರ ಚುನಾವಣೆಯಲ್ಲಿ ಅಮಿತ್ ಶಾ 5.57 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಈ ಹಿಂದೆ ಬಿಜೆಪಿಯ ಪ್ರಮುಖ ಲಾಲ್ ಕೃಷ್ಣ ಅಡ್ವಾಣಿ ಅವರು ಗಾಂಧಿನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



