ದಕ್ಷಿಣದಲ್ಲಿ NDA ಕೈಹಿಡಿದ ಮತದಾರ; ಆಂಧ್ರ, ಕರ್ನಾಟಕದಲ್ಲಿ ಮುನ್ನಡೆ, ಕೇರಳದಲ್ಲಿ ಖಾತೆ ತೆರೆಯುವ ನಿರೀಕ್ಷೆ
ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು(NDA) ಎರಡು ದಕ್ಷಿಣದ ರಾಜ್ಯಗಳಲ್ಲಿ - ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಮುನ್ನಡೆ ಸಾಧಿಸುತ್ತಿದ್ದು, ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಬಣಗಳು ಉತ್ತಮ ಪ್ರದರ್ಶನ ತೋರಿಸುತ್ತಿವೆ.

ನವದೆಹಲಿ: ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು(NDA) ಎರಡು ದಕ್ಷಿಣದ ರಾಜ್ಯಗಳಲ್ಲಿ - ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಮುನ್ನಡೆ ಸಾಧಿಸುತ್ತಿದ್ದು, ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಬಣಗಳು ಉತ್ತಮ ಪ್ರದರ್ಶನ ತೋರಿಸುತ್ತಿವೆ. ಬಿಜೆಪಿಯು ಐದು ದಕ್ಷಿಣ ರಾಜ್ಯಗಳಾದ ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಾದ ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಈ ಬಾರಿ ಉತ್ತಮ ಸಾಧತೆ ತೋರಿಸುತ್ತಿದೆ.
ಚುನಾವಣಾ ಆಯೋಗದ ಇತ್ತೀಚಿನ ವರದಿ ಪ್ರಕಾರ, ಕರ್ನಾಟಕದ 28 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 18 ರಲ್ಲಿ ಮುನ್ನಡೆ ಸಾಧಿಸಿದ್ದರೆ, ಅದರ ಮಿತ್ರ ಪಕ್ಷವಾದ ಜೆಡಿಎಸ್ ಮೂರೂ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಆಡಳಿತಾರೂಢ ಕಾಂಗ್ರೆಸ್‌ನ ಅಭ್ಯರ್ಥಿಗಳು ಏಳು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ 25 ಲೋಕಸಭಾ ಚುನಾವಣೆಗಳಲ್ಲಿ 21ರಲ್ಲಿ ಎನ್‌ಡಿಎ ಮುನ್ನಡೆಯಲ್ಲಿದೆ. ಎನ್ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ 16 ಸ್ಥಾನಗಳಲ್ಲಿ ಮುಂದಿದ್ದರೆ, ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜನಸೇನಾ ಪಕ್ಷಗಳು ಕ್ರಮವಾಗಿ ಮೂರು ಮತ್ತು ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಉಳಿದ 4ರಲ್ಲಿ ಆಡಳಿತಾರೂಢ ವೈಎಸ್‌ಆರ್‌ಸಿಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಆಡಳಿತ ಪಕ್ಷ ಹಾಗೂ ಬಿಜೆಪಿ ತಲಾ 8ರಲ್ಲಿ ಮುಂದಿವೆ. ಎಐಎಂಐಎಂ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.
ಡಿಎಂಕೆ ಮತ್ತು ಕಾಂಗ್ರೆಸ್ ನೇತೃತ್ವದ ಬಣಗಳು ಕ್ರಮವಾಗಿ ತಮಿಳುನಾಡು ಮತ್ತು ಕೇರಳದಲ್ಲಿ ಮುನ್ನಡೆ ಸಾಧಿಸುತ್ತಿವೆ, ತಮಿಳುನಾಡಿಗೆ 39 ಸ್ಥಾನಗಳ ಪೈಕಿ 36 ಸ್ಥಾನಗಳಿಗೆ ಲಭ್ಯವಾಗಿರುವ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ಡಿಎಂಕೆ 21 ರಲ್ಲಿ ಮುನ್ನಡೆ ಸಾಧಿಸಿದೆ. ಒಟ್ಟಾರೆ ಮೈತ್ರಿ ಅಭ್ಯರ್ಥಿಗಳು 35 ಸ್ಥಾನಗಳಲ್ಲಿ ಮುಂದಿದ್ದಾರೆ. ಎನ್‌ಡಿಎ ಘಟಕ ಪಿಎಂಕೆ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.
ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆಯಲ್ಲಿದೆ. ವಿರೋಧ ಪಕ್ಷವು 20 ಸ್ಥಾನಗಳಲ್ಲಿ 13 ರಲ್ಲಿ ಮುನ್ನಡೆ ಸಾಧಿಸಿದೆ, ಅದರ ಮಿತ್ರ ಪಕ್ಷ ಐಯುಎಂಎಲ್ ಎರಡರಲ್ಲಿ ಮುಂದಿದೆ. ಯುಡಿಎಫ್ ಘಟಕಗಳಾದ ಕೆಇಸಿ ಮತ್ತು ಆರ್‌ಎಸ್‌ಪಿ ತಲಾ ಒಂದು ಸ್ಥಾನದಲ್ಲಿ ಮುಂದಿವೆ.
ತ್ರಿಶೂರ್ ಸೇರಿದಂತೆ ಬಿಜೆಪಿ ಎರಡು ಮತ್ತು ಆಡಳಿತಾರೂಢ ಸಿಪಿಐ-ಎಂ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಲಕ್ಷದ್ವೀಪ ಮತ್ತು ಎನ್‌ಡಿಎ ಆಡಳಿತವಿರುವ ಪುದುಚೇರಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



