ದೇಶ

ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಸೋಲು: ಸಿಎಂ ಸ್ಥಾನಕ್ಕೆ ನವೀನ್ ಪಟ್ನಾಯಕ್ ರಾಜೀನಾಮೆ

ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜು ಜನತಾದಳದ ಅನಿರೀಕ್ಷಿತ ಸೋಲಿನ ನಂತರ ಪಕ್ಷದ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಸೋಲು: ಸಿಎಂ ಸ್ಥಾನಕ್ಕೆ ನವೀನ್ ಪಟ್ನಾಯಕ್ ರಾಜೀನಾಮೆ
ನವೀನ್ ಪಟ್ನಾಯಕ್
Published On :

ಭುವನೇಶ್ವರ: ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜು ಜನತಾದಳದ ಅನಿರೀಕ್ಷಿತ ಸೋಲಿನ ನಂತರ ಪಕ್ಷದ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.

ನವೀನ್ ಪಟ್ನಾಯಕ್ ಅವರು ಭುವನೇಶ್ವರದ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಘುಬರ್ ದಾಸ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ 24 ವರ್ಷಗಳ ಪಟ್ನಾಯಕ್ ಅವರ ಸುದೀರ್ಘ ಆಳ್ವಿಕೆ ಕೊನೆಗೊಂಡಿದೆ.

ಒಡಿಶಾದಲ್ಲಿ ಆಡಳಿತವಿರೋಧಿ ಅಲೆಗೆ ಸಿಕ್ಕ ಆಡಳಿತರೂಢ ಬಿಜೆಡಿ ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಸರಳ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.

147 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ 80 ಸ್ಥಾನ ಗೆದ್ದುಕೊಂಡಿದ್ದು, ಸರಳ ಬಹುಮತ ಪಡೆದಿದೆ. ಅಧಿಕಾರ ಕಳೆದುಕೊಂಡರೂ ಬಿಜೆಡಿ 49 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಗೌರವವನ್ನು ಉಳಿಸಿಕೊಂಡಿದೆ. ಆದರೆ, ಬಿಜೆಡಿ ಸರ್ಕಾರದ ಕನಿಷ್ಠ ಎಂಟು ಸಚಿವರು ಆಡಳಿತ ವಿರೋಧಿ ಅಲೆಗೆ ಸಿಕ್ಕು ಪರಾಭವಗೊಂಡಿದ್ದಾರೆ.

ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರೇ 2 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದರು. ಈ ಪೈಕಿ ಬೊಲಾಂಗೀರ್‌ ಜಿಲ್ಲೆಯ ಕಾಂತಾಬಂಜಿ ಕ್ಷೇತ್ರದಲ್ಲಿ ಬಿಜೆಪಿಯ ಲಕ್ಷ್ಮಣ್‌ ಬಾಗ್ ಅವರ ವಿರುದ್ಧ ಸೋತಿದ್ದಾರೆ. ಆದರೆ, ಕಣಕ್ಕಿಳಿದಿದ್ದ ಮತ್ತೊಂದು ಕ್ಷೇತ್ರ ಗಂಜಾಂ ಜಿಲ್ಲೆಯ ಹಿಂಜಿಲಿಯಲ್ಲಿ ಬಿಜೆಪಿ ಅಭ್ಯರ್ಥಿ ಸಿಸಿರ್ ಕುಮಾರ್ ಮಿಶ್ರಾ ವಿರುದ್ಧ ಜಯಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.