World Environment Day: 'ಏಕ್ ಪೇಡ್ ಮಾ ಕೆ ನಾಮ್' ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
ಇಂದು ಜೂನ್ 5, ವಿಶ್ವ ಪರಿಸರ ದಿನ. ವಿಶ್ವ ಪರಿಸರ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ‘ಏಕ್ ಪೆಡ್ ಮಾ ಕೆ ನಾಮ್’(ಅಮ್ಮನ ಹೆಸರಿನಲ್ಲಿ ಒಂದು ವೃಕ್ಷ) ಅಭಿಯಾನವನ್ನು ಪರಿಚಯಿಸಿದರು.

ನವದೆಹಲಿ: ಇಂದು ಜೂನ್ 5, ವಿಶ್ವ ಪರಿಸರ ದಿನ. ವಿಶ್ವ ಪರಿಸರ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ‘ಏಕ್ ಪೆಡ್ ಮಾ ಕೆ ನಾಮ್’(ಅಮ್ಮನ ಹೆಸರಿನಲ್ಲಿ ಒಂದು ವೃಕ್ಷ) ಅಭಿಯಾನವನ್ನು ಪರಿಚಯಿಸಿದರು. ಅವರು ದೆಹಲಿಯ ಬುದ್ಧ ಜಯಂತಿ ಪಾರ್ಕ್ನಲ್ಲಿ ಅಶ್ವತ್ಥ ಮರದ ಸಸಿಯನ್ನು ನೆಡುವ ಮೂಲಕ ದಿನಾಚರಣೆಯನ್ನು ಅರ್ಥವತ್ತಾಗಿಸಿದರು.
ಕೇಂದ್ರ ಪರಿಸರ ಖಾತೆ ಸಚಿವ ಭೂಪೇಂದರ್ ಯಾದವ್ ಮತ್ತು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಪ್ರಧಾನಿಯವರಿಗೆ ಸಾಥ್ ನೀಡಿದರು.
World Environment Day 2024: ಪರಿಸರವನ್ನು ಉಳಿಸಿ, ಬೆಳೆಸುವ ಉದ್ದೇಶ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ.
ಜೂನ್ 5 ರಂದು ವಿಶ್ವ ಪರಿಸರ ದಿನ: 1972ರಲ್ಲಿ ಜೂನ್ 5 ರಂದು ಸ್ವೀಡನ್ನ ಸ್ಟಾಕ್ಹೋಮ್ನಲ್ಲಿ ಮಾನವ ಪರಿಸರ ಸಂಬಂಧದ ಕುರಿತು ವಿಶ್ವಸಂಸ್ಥೆಯು ಸಮ್ಮೇಳನವೊಂದನ್ನು ನಡೆಸಿತ್ತು. ಈ ದಿನವನ್ನು ಗೌರವಿಸಿ 1973ರಲ್ಲಿ ಪ್ರಪಂಚದಾದ್ಯಂತದ ಮೊದಲ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಆ ದಿನವನ್ನು ವಿಶ್ವ ಪರಿಸರ ದಿನ ಎಂದು ಆಚರಿಸಲಾಗುತ್ತದೆ. ಭೂಮಿ ಪುನಃಸ್ಥಾಪನೆ, ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ ಈ ವರ್ಷದ ಧ್ಯೇಯವಾಕ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


