ನಾರಾಯಣಪುರದಲ್ಲಿ ಎನ್‌ಕೌಂಟರ್: 7 ನಕ್ಸಲರ ಹತ್ಯೆ, 3 ಯೋಧರಿಗೆ ಗಾಯ
ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಏಳು ನಕ್ಸಲೀಯರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಯೋಧರು ಗಾಯಗೊಂಡಿದ್ದಾರೆ.

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಏಳು ನಕ್ಸಲೀಯರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಓರ್ಚಾ ಪ್ರದೇಶದ ಗೋಬೆಲ್ ಮತ್ತು ತುಲ್ತುಲಿ ಗ್ರಾಮಗಳ ಸಮೀಪದ ಕಾಡಿನಲ್ಲಿ ಮಧ್ಯಾಹ್ನ 3 ಗಂಟೆಗೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾರಾಯಣಪುರ, ಕೊಂಡಗಾಂವ್, ದಾಂತೇವಾಡ ಮತ್ತು ಬಸ್ತಾರ್ ಜಿಲ್ಲೆಗಳ ಪೊಲೀಸ್ ಜಿಲ್ಲಾ ಮೀಸಲು ಗಾರ್ಡ್‌ಗೆ ಸೇರಿದ ಸಿಬ್ಬಂದಿ ಮತ್ತು ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್(ಐಟಿಬಿಪಿ) 45ನೇ ಬೆಟಾಲಿಯನ್ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಎನ್ ಕೌಂಟರ್ ನಂತರ, ಸಮವಸ್ತ್ರದಲ್ಲಿದ್ದ ಏಳು ನಕ್ಸಲರ ದೇಹಗಳು ಮತ್ತು ಕೆಲವು ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗುಂಡಿನ ಕಾಳಗದಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಹತ್ಯೆಯಾದ ನಕ್ಸಲೀಯರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



