ಲೋಕಸಭೆಯಲ್ಲಿ ಎಸ್‌ಪಿ ನಾಯಕರಾಗಲಿದ್ದಾರೆ ಅಖಿಲೇಶ್ ಯಾದವ್
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಲೋಕಸಭೆಯಲ್ಲಿ ಪಕ್ಷದ ನಾಯಕರಾಗಲಿದ್ದು, ದೆಹಲಿಯಲ್ಲಿ ಈ ಪ್ರಕ್ರಿಯೆಗಳು ನಡೆಯಲಿವೆ.

ಲಖನೌ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಲೋಕಸಭೆಯಲ್ಲಿ ಪಕ್ಷದ ನಾಯಕರಾಗಲಿದ್ದು, ದೆಹಲಿಯಲ್ಲಿ ಈ ಪ್ರಕ್ರಿಯೆಗಳು ನಡೆಯಲಿವೆ ಎಂದು ಅವರ ಪಕ್ಷದ ಹಿರಿಯ ನಾಯಕರೊಬ್ಬರು ಶನಿವಾರ ತಿಳಿಸಿದ್ದಾರೆ.
ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯ ವಕ್ತಾರ ರಾಜೇಂದ್ರ ಚೌಧರಿ ಅವರು ಪಿಟಿಐಗೆ ತಿಳಿಸಿದ್ದಾರೆ.
“ಲೋಕಸಭೆಯಲ್ಲಿ ಅಖಿಲೇಶ್ ಯಾದವ್ ಪಕ್ಷದ ನಾಯಕರಾಗುತ್ತಾರೆ ಎಂದು ತಿಳಿದುಬಂದಿದೆ. ಆದರೆ ಸಂಸದೀಯ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಔಪಚಾರಿಕತೆ ಇದೆ ಮತ್ತು ಇದು ದೆಹಲಿಯಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಮತ್ತು ಲೋಕಸಭೆಯ ಹಂಗಾಮಿ ಸ್ಪೀಕರ್ ಆಯ್ಕೆ ಬಳಿಕ ಸಂಸದೀಯ ಪಕ್ಷದ ನಾಯಕರ ಆಯ್ಕೆಯ ಪ್ರಕ್ರಿಯೆ ನಡೆಯಲಿದೆ’ ಎಂದು ಅವರು ಹೇಳಿದ್ದಾರೆ.
ಅಖಿಲೇಶ್ ಯಾದವ್ ಅವರು ಮೈನ್‌ಪುರಿಯ ಕರ್ಹಾಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಚೌಧರಿ ಖಚಿತಪಡಿಸಿದ್ದಾರೆ.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಕನೌಜ್ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



