ದೇಶ

ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ಗಾಂಧಿ: CWC ಸಭೆಯಲ್ಲಿ ನಿರ್ಣಯ ಅಂಗೀಕಾರ

ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ರಚನೆಯಾಗುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳು ಆರಂಭವಾಗಿವೆ.

ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ಗಾಂಧಿ: CWC ಸಭೆಯಲ್ಲಿ ನಿರ್ಣಯ ಅಂಗೀಕಾರ
ಸಿಡಬ್ಲ್ಯುಸಿ ಸಭೆ — online desk
Published On :

ನವದೆಹಲಿ: ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ರಚನೆಯಾಗುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳು ಆರಂಭವಾಗಿವೆ.

ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಸಲು ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ.

ಸಿಡಬ್ಲ್ಯುಸಿ ಸಭೆಯ ಬಳಿಕ ಮಾತನಾಡಿರುವ ಕಾಂಗ್ರೆಸ್ ಸಂಸದರಾದ ಕುಮಾರಿ ಸೆಲ್ಜಾ, ರಾಹುಲ್ ಗಾಂಧಿ ವಿಪಕ್ಷದ ನಾಯಕರಾಗಬೇಕೆಂಬುದು ಸಿಡಬ್ಲ್ಯುಸಿಯ ಇಚ್ಛೆಯಾಗಿದೆ ಎಂದು ಹೇಳಿದ್ದಾರೆ. ಕೆಸಿ ವೇಣುಗೋಪಾಲ್ ಮಾತನಾಡಿ, ವಿಪಕ್ಷ ನಾಯಕರಾಗುವಂತೆ ಸಿಡಬ್ಲ್ಯುಸಿ ಸಭೆ ಸರ್ವಾನುಮತದಿಂದ ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಿದೆ. ಸಿಡಬ್ಲ್ಯುಸಿ ನಿರ್ಣಯ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿಯವರ ಪ್ರಯತ್ನಗಳನ್ನು ಶ್ಲಾಘಿಸಿದೆ.

"ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿನ್ಯಾಸಗೊಳಿಸಿ, ಮುನ್ನಡೆಸಿದ ಭಾರತ್ ಜೋಡೋ ಯಾತ್ರೆ ಮತ್ತು ಭಾರತ್ ಜೋಡೋ ನ್ಯಾಯ್ ಯಾತ್ರೆ ನಮ್ಮ ರಾಷ್ಟ್ರದ ರಾಜಕೀಯದಲ್ಲಿ ಐತಿಹಾಸಿಕ ತಿರುವುಗಳು ಮತ್ತು ಭರವಸೆಯನ್ನು ಹುಟ್ಟುಹಾಕಿದವು. ಮತ್ತು ನಮ್ಮ ಲಕ್ಷಾಂತರ ಕಾರ್ಯಕರ್ತರು ಮತ್ತು ನಮ್ಮ ಕೋಟಿಗಟ್ಟಲೆ ಮತದಾರರಲ್ಲಿ ವಿಶ್ವಾ ಹೆಚ್ಚಿಸಿತು" ಎಂದು ವೇಣುಗೋಪಾಲ್ ಹೇಳಿದ್ದಾರೆ.

ಇತರ ಯಾವುದೇ ವ್ಯಕ್ತಿಗಳಿಗಿಂತ ಹೆಚ್ಚಾಗಿ ರಾಹುಲ್ ಗಾಂಧಿಯವರ ಚುನಾವಣಾ ಪ್ರಚಾರ ಏಕ ಮನಸ್ಸು, ತೀಕ್ಷ್ಣ ಮತ್ತು ಮೊನಚಾಗಿತ್ತು ಹಾಗೂ ಈ ಪ್ರಚಾರ ನಮ್ಮ ಗಣರಾಜ್ಯದ ಸಂವಿಧಾನದ ರಕ್ಷಣೆಯನ್ನು ಚುನಾವಣೆಯ ಪ್ರಮುಖ ವಿಷಯವಾಯಿತು ಎಂದು ವೇಣುಗೋಪಾಲ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.