ಕಂಗನಾ ರಣಾವತ್‌ಗೆ ಕಪಾಳಮೋಕ್ಷ: CISF ಮಹಿಳಾ ಪೇದೆ ವಿರುದ್ಧ FIR ದಾಖಲು
ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಮಹಿಳಾ ಪೇದೆಯನ್ನು ಇನ್ನೂ ಬಂಧಿಸಿಲ್ಲ. ಆದರೆ, ಐಪಿಸಿ ಸೆಕ್ಷನ್ 321 ಮತ್ತು 341 ರ ಅಡಿಯಲ್ಲಿ ಕಾನ್‌ಸ್ಟೆಬಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಚಂಡೀಗಢ: ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಮಹಿಳಾ ಪೇದೆಯನ್ನು ಇನ್ನೂ ಬಂಧಿಸಿಲ್ಲ. ಆದರೆ, ಐಪಿಸಿ ಸೆಕ್ಷನ್ 321 ಮತ್ತು 341 ರ ಅಡಿಯಲ್ಲಿ ಕಾನ್‌ಸ್ಟೆಬಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೊಹಾಲಿ ವಿಮಾನ ನಿಲ್ದಾಣ ಪೊಲೀಸರು ಐಪಿಸಿ ಸೆಕ್ಷನ್ 321 ಮತ್ತು 341ರ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್‌ಸ್ಟೆಬಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದುವರೆಗೂ ಆಕೆಯನ್ನು ಬಂಧಿಸಿಲ್ಲ. ಇದು ಜಾಮೀನು ನೀಡಬಹುದಾದ ಅಪರಾಧವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಮುಕ್ತಾಯಗೊಂಡ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಭೆಯಲ್ಲಿ ಭಾಗವಹಿಸಲು ಕಂಗನಾ ದೆಹಲಿಗೆ ವಿಮಾನ ಏರಲು ಹೊರಟಿದ್ದಾಗ ಜೂನ್ 6 ರಂದು ಮಧ್ಯಾಹ್ನ 3.30ರ ಸುಮಾರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕಂಗನಾ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈಮಧ್ಯೆ, ಈ ವಿಷಯದ ಕುರಿತು ಮಾತನಾಡಿದ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಸಂಸದೆ ಹರ್‌ಸಿಮ್ರತ್ ಕೌರ್ ಬಾದಲ್, ಕಂಗನಾ ಅವರ ನಡವಳಿಕೆಯನ್ನು ಟೀಕಿಸಿದ್ದಾರೆ. ಜವಾಹ್ದಾರಿಯುತ ಸ್ಥಾನದಲ್ಲಿರುವವರು ಮೂರ್ಖ ಮಾತುಗಳನ್ನು ಹೇಳಿದಾಗ ಮತ್ತು ಅನಗತ್ಯ ಹೇಳಿಕೆಗಳನ್ನು ನೀಡಿದಾಗ ಯಾವಾಗಲೂ ಅದಕ್ಕೆ ಪ್ರತಿಕ್ರಿಯೆ ಇರುತ್ತದೆ ಎಂದು ಹೇಳಿದ್ದಾರೆ.
ಕಂಗನಾ ರಣಾವತ್ ತನ್ನ ಹೈಕಮಾಂಡ್ ಅನ್ನು ಮೆಚ್ಚಿಸಲು ಪ್ರಯತ್ನಿಸುವ ಬದಲು ತನ್ನ ಜವಾಬ್ದಾರಿಯನ್ನು ಅರ್ಥಮಾಡಿಕೊಳ್ಳಬೇಕು. ನಟಿಯಾಗಿ ಆಕೆಯನ್ನು ಅನೇಕ ಜನರು ಹಿಂಬಾಲಿಸುತ್ತಾರೆ. ಆದರೆ, ಮೂರ್ಖ ಮಾತುಗಳನ್ನು ಹೇಳಿದಾಗ ಮತ್ತು ಅನಗತ್ಯ ಹೇಳಿಕೆಗಳನ್ನು ನೀಡಿದಾಗ ಅದಕ್ಕೊಂದು ಪ್ರತಿಕ್ರಿಯೆ ಉಂಟಾಗುತ್ತದೆ. ನೀವು ಬೇರೆಯವರ ತಾಯಂದಿರಿಗೆ ಹೇಳಿದಂತಹ ಮಾತುಗಳನ್ನು ನಿಮ್ಮ ತಾಯಿಗೆ ಯಾರಾದರೂ ಹೇಳಿದರೆ, ನಿನಗೂ ಅದು ಇಷ್ಟವಾಗುವುದಿಲ್ಲ ಎಂದು ಬಾದಲ್ ಹೇಳಿದರು.
ನಿಮ್ಮ ತಪ್ಪನ್ನು ನೋಡುವ ಬದಲು ನೀವು ಅವರನ್ನು ಭಯೋತ್ಪಾದಕರು ಎಂದು ಕರೆಯುತ್ತಿದ್ದೀರಿ. ವಿಷ ಹರಡುವುದು ನಿಮ್ಮ ಪಕ್ಷದ ನೀತಿ. ವಿಷವನ್ನು ಹರಡುವ ಬದಲು ಸಿಹಿ ಹರಡಿದರೆ ಅಂತಹ ಪರಿಸ್ಥಿತಿಯನ್ನು ಎದುರಿಸಬೇಕಾಗಿಲ್ಲ ಎಂದು ಅವರು ಹೇಳಿದರು.
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಗುರುವಾರ ಮಹಿಳಾ ಪೇದೆಯನ್ನು ಅಮಾನತುಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



