ಹವಾಮಾನ ವರದಿ: ಜೂನ್ 13ರವರೆಗೆ ರಾಜ್ಯದಲ್ಲಿ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ನಾಲ್ಕು ದಿನಗಳಲ್ಲಿ ಮಧ್ಯ ಮತ್ತು ದಕ್ಷಿಣ ಪ್ರದೇಶಗಳು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆಯ ಮುನ್ನೆಚ್ಚರಿಕೆ ನೀಡಿದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ನವದೆಹಲಿ/ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ನಾಲ್ಕು ದಿನಗಳಲ್ಲಿ ಮಧ್ಯ ಮತ್ತು ದಕ್ಷಿಣ ಪ್ರದೇಶಗಳು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆಯ ಮುನ್ನೆಚ್ಚರಿಕೆ ನೀಡಿದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಐಎಂಡಿ ಪ್ರಕಾರ, ನೈಋತ್ಯ ಮಾನ್ಸೂನ್ ಮಧ್ಯ ಅರೇಬಿಯನ್ ಸಮುದ್ರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಕರಾವಳಿ ಆಂಧ್ರಪ್ರದೇಶ, ಮತ್ತು ಬಂಗಾಳ ಕೊಲ್ಲಿಯ ಹೆಚ್ಚಿನ ಪ್ರದೇಶಗಳನ್ನು ಒಳಗೊಂಡಂತೆ ಇನ್ನಷ್ಟು ಪ್ರದೇಶಗಳಿಗೆ ಮುಂದುವರೆದಿದೆ.
ಮುಂದಿನ ನಾಲ್ಕು ದಿನಗಳಲ್ಲಿ ಕೊಂಕಣ, ಗೋವಾ, ಮಹಾರಾಷ್ಟ್ರ, ಮರಾಠವಾಡ, ಸೌರಾಷ್ಟ್ರ, ಕಚ್, ಕರಾವಳಿ ಆಂಧ್ರ ಪ್ರದೇಶ, ಯಾನಂ, ರಾಯಲಸೀಮಾ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಈಶಾನ್ಯ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ವ್ಯಾಪಕ ಮಳೆ, ಗುಡುಗು ಮತ್ತು ಸಿಡಿಲು ಸಹ IMD ಮುನ್ಸೂಚನೆ ನೀಡಿದೆ. ವಾಯುವ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಇಂದು ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ.
ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ಇದೇ ರೀತಿಯ ಹವಾಮಾನದ ಸಾಧ್ಯತೆ ಇದೆ. ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಸೋಮವಾರದವರೆಗೆ ತೀವ್ರ ಶಾಖದ ಅಲೆಯನ್ನು ನಿರೀಕ್ಷಿಸಲಾಗಿದೆ. ಮುಂದಿನ ಎರಡು ಮೂರು ದಿನಗಳ ಕಾಲ ಮಧ್ಯಪ್ರದೇಶ, ಜಾರ್ಖಂಡ್, ಪಂಜಾಬ್, ಹರಿಯಾಣ, ಬಿಹಾರ ಮತ್ತು ಒಡಿಶಾದಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ಕಂಡುಬರುವ ಸಾಧ್ಯತೆಯಿದೆ.
ಮುಂದಿನ ಮೂರ್ನಾಲ್ಕು ದಿನಗಳಲ್ಲಿ ನೈಋತ್ಯ ಮಾನ್ಸೂನ್ ದಕ್ಷಿಣ ಛತ್ತೀಸ್‌ಗಢ, ದಕ್ಷಿಣ ಒಡಿಶಾ ಮತ್ತು ಬಂಗಾಳಕೊಲ್ಲಿಯ ಉಳಿದ ಭಾಗಗಳಿಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 13ರವರೆಗೆ ರಾಜ್ಯದಲ್ಲಿ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಕರ್ನಾಟಕದಲ್ಲಿಯೂ ಮಳೆ ಅಬ್ಬರ ಮುಂದುವರಿದಿದೆ. ಇಂದಿನಿಂದ ಜೂನ್ 13ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದ್ದು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹಾಗೂ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲೆಿಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲೆಿಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



