ದೇಶ

ಎಕ್ಸಿಟ್ ಪೋಲ್ ಪ್ರಸಾರ ಮಾಡಿದ ಮಾಧ್ಯಮಗಳ ವಿರುದ್ಧ ತನಿಖೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು 31 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಲು ಕಾರಣವಾದ ಮಾಧ್ಯಮ ಸಂಸ್ಥೆಗಳ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಎಕ್ಸಿಟ್ ಪೋಲ್ ಪ್ರಸಾರ ಮಾಡಿದ ಮಾಧ್ಯಮಗಳ ವಿರುದ್ಧ ತನಿಖೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ
ಸುಪ್ರೀಂ ಕೋರ್ಟ್ — online
Published On :

ನವದೆಹಲಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು 31 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಲು ಕಾರಣವಾದ ಮಾಧ್ಯಮ ಸಂಸ್ಥೆಗಳು ಮತ್ತು ಅವರ ಕಂಪನಿಗಳ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಜೂನ್ 1 ರಂದು ಕೊನೆಯ ಹಂತದ ಚುನಾವಣೆ ಮುಗಿದ ನಂತರ ಮಾಧ್ಯಮ ಸಂಸ್ಥೆಗಳು ಪ್ರಸಾರ ಮಾಡಿದ ಎಕ್ಸಿಟ್ ಪೋಲ್‌ಗಳು ಮತ್ತು ಆ ಕುರಿತು ಚರ್ಚೆಯು ಜೂನ್ 3 ರವರೆಗೆ(ಸೋಮವಾರ) ಮಾರುಕಟ್ಟೆ ತೆರೆಯುವವರೆಗೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಪ್ರೆರೇಪಿಸಿದವು. ಆದರೆ ಜೂನ್ 4 ರಂದು ಫಲಿತಾಂಶ ಪ್ರಕಟವಾದ ನಂತರ ಷೇರು ಮಾರುಕಟ್ಟೆ ಕುಸಿತಗೊಂಡಿದ್ದರಿಂದ 31 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿತು ಎಂದು ಅರ್ಜಿದಾರರು ಹೇಳಿದ್ದಾರೆ.

ಎಕ್ಸಿಟ್ ಪೋಲ್‌ಗಳ ನಂತರ ಷೇರು ಮಾರುಕಟ್ಟೆ ಎತ್ತರಕ್ಕೆ ಏರಿತು. ಆದರೆ

ಜೂನ್ 4 ರಂದು ನಿಜವಾದ ಫಲಿತಾಂಶ ಪ್ರಕಟವಾದ ನಂತರ ಅದು ಕುಸಿತಕ್ಕೆ ಕಾರಣವಾಯಿತು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಷೇರು ಮಾರುಕಟ್ಟೆ ಕುಸಿತದ ಪರಿಣಾಮವಾಗಿ ಸಾಮಾನ್ಯ ಹೂಡಿಕೆದಾರರಿಗೆ 31 ಲಕ್ಷ ಕೋಟಿ ರೂಪಾಯಿಗಳ ಭಾರಿ ನಷ್ಟವಾಗಿದೆ ಎಂದು ತನಿಖೆ ಕೋರಿ ಅರ್ಜಿ ಸಲ್ಲಿಸಿದ ವಕೀಲ ಬಿಎಲ್ ಜೈನ್ ಹೇಳಿದ್ದಾರೆ.

"ಯಾವುದೇ ಸುದ್ದಿ ಸಂಸ್ಥೆ/ಚರ್ಚೆ/ಕಾರ್ಯಕ್ರಮದ ಪ್ರಸಾರವು ಯಾವುದೇ ರಾಜಕೀಯ ಪಕ್ಷದ ಪರವಾಗಿ ಅಥವಾ ವಿರುದ್ಧವಾಗಿ ಪಕ್ಷಪಾತ ಅಥವಾ ಪೂರ್ವಾಗ್ರಹ ಪೀಡಿತ ಅಭಿಪ್ರಾಯ ಪ್ರಕಟಿಸಬಾರದು. ದುರದೃಷ್ಟವಶಾತ್, ಅನಿಯಂತ್ರಿತ ಎಲೆಕ್ಟ್ರಾನಿಕ್ ಮಾಧ್ಯಮವು ವಾಣಿಜ್ಯ ಉದ್ಯಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅದು ಒಂದು ರಾಜಕೀಯ ಪಕ್ಷದ ವಿರುದ್ಧ ಮತ್ತು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡುತ್ತಿವೆ'' ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.