ದೇಶ

ಮೋದಿ ಪದಗ್ರಹಣ: ಕಾರ್ಯಕ್ರಮದಲ್ಲಿ ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು ಭಾಗಿ!

ನಿಯೋಜಿತ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತೃತೀಯಲಿಂಗಿ ಸಮುದಾಯದ ಸುಮಾರು 50 ಮಂದಿ, ಸ್ವಚ್ಛತಾ ಕಾರ್ಮಿಕರು, ಪೌರ ಕಾರ್ಮಿಕರಿಗೆ ಆಹ್ವಾನ ನೀಡಲಾಗಿದೆ.

ಮೋದಿ ಪದಗ್ರಹಣ: ಕಾರ್ಯಕ್ರಮದಲ್ಲಿ ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು ಭಾಗಿ!
ನರೇಂದ್ರ ಮೋದಿ
Published On :

ನವದೆಹಲಿ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತೃತೀಯಲಿಂಗಿ ಸಮುದಾಯದ ಸುಮಾರು 50 ಮಂದಿ, ಸ್ವಚ್ಛತಾ ಕಾರ್ಮಿಕರು, ಪೌರ ಕಾರ್ಮಿಕರಿಗೆ ಆಹ್ವಾನ ನೀಡಲಾಗಿದೆ. ಅವರು ನೂತನ ಸಚಿವ ಸಂಪುಟದ ಪ್ರಧಾನಿ ಮತ್ತು ಸದಸ್ಯರಿಗೆ ಆಶೀರ್ವಾದ ಮಾಡಲಿದ್ದಾರೆ.

ಸಮಾರಂಭಕ್ಕೂ ಮುನ್ನ ಬಿಜೆಪಿ ಸಂಸದ ಹಾಗೂ ಮಾಜಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್ ಅವರು ತಮ್ಮ ನಿವಾಸದಲ್ಲಿ ಸಮುದಾಯದವರನ್ನು ಸನ್ಮಾನಿಸಿದರು.

ಇದು ಪ್ರಧಾನಿ ಮೋದಿಯವರ 'ಸಬ್ಕಾ ಸಾಥ್ ಸಬ್ಕಾ ವಿಶ್ವಾಸ್ ಮತ್ತು ಸಭಾ ಪ್ರಯಾಸ್'ನ ಒಂದು ಭಾಗವಾಗಿದೆ. ಸಮಾರಂಭದಲ್ಲಿ ತೃತೀಯಲಿಂಗ ಸಮುದಾಯದ ಜನರನ್ನು ಸೇರಿಸಿಕೊಳ್ಳುವ ಉದ್ದೇಶ ಪ್ರಧಾನಮಂತ್ರಿಯವರ ಎಲ್ಲರನ್ನೂ ಒಳಗೊಳ್ಳುವಿಕೆಯ ಆಶಯದ ಸಂದೇಶವನ್ನು ತಲುಪಿಸುವುದಾಗಿದೆ ಎಂದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಇದೇ ಮೊದಲ ಬಾರಿಗೆ ತೃತೀಯಲಿಂಗ ಸಮುದಾಯದವರನ್ನು ಔಪಚಾರಿಕವಾಗಿ ಆಹ್ವಾನಿಸಲಾಗಿದೆ, ಇವರು ಸಮಾಜದ ಸಬಲೀಕರಣದಲ್ಲಿ ಕೊಡುಗೆ ನೀಡಿದ್ದಾರೆ ಎಂದು ವೀರೇಂದ್ರ ಕುಮಾರ್ ಹೇಳಿದರು.

ಹೊಸ ಸರ್ಕಾರಕ್ಕೆ ಆಶೀರ್ವಾದ ನೀಡಲು ತೃತೀಯಲಿಂಗ ಸಮುದಾಯದ 50 ಸದಸ್ಯರೊಂದಿಗೆ ಇಲ್ಲಿಗೆ ಬಂದಿದ್ದೇವೆ ಎಂದು ಸೋನಮ್ ಕಿನ್ನಾರ್ ಹೇಳಿದರು.

ಜಾತಿ ಆಧಾರಿತ ರಾಜಕೀಯದಿಂದಾಗಿ ಪ್ರಧಾನಿ ಮೋದಿ ಅವರು ನಿರೀಕ್ಷಿಸಿದಷ್ಟು ಸ್ಥಾನಗಳನ್ನು ಪಡೆಯದಿರುವುದು ನಮಗೆ ಬೇಸರ ತಂದಿದೆ ಆದರೆ ನಮಗೆ ಪ್ರಧಾನಿ ಮೇಲೆ ಸಂಪೂರ್ಣ ವಿಶ್ವಾಸವಿದೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಿಸುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.