Modi 3.0: ಸಂಪುಟ ದರ್ಜೆ ಸಚಿವರಾಗಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ
ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಭಾನುವಾರ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜನತಾ ದಳ(ಜಾತ್ಯತೀತ) ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಭಾನುವಾರ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾತ್ರಿ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಚ್ ಡಿ ಕುಮಾರಸ್ವಾಮಿ ಅವರಿಗೆ ಪತಿಜ್ಞಾವಿಧಿ ಬೋಧಿಸಿದರು. ಸರತಿಯಲ್ಲಿ 9ನೇಯವರಾಗಿ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಎಂಟು ಜನ ಬಿಜೆಪಿ ನಾಯಕರು ಪ್ರಮಾಣ ಸ್ವೀಕರಿಸಿದ ನಂತರ ಎನ್‌ಡಿಎ ಒಕ್ಕೂಟದ ಮಿತ್ರಪಕ್ಷಗಳಲ್ಲಿ ಮೊದಲಿಗರಾಗಿ ಕುಮಾರಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಲೋಕಸಭೆ ಚುನಾವಣೆಯಲ್ಲಿ ಗೆದ್ದ ಇಬ್ಬರು ಜೆಡಿಎಸ್ ಅಭ್ಯರ್ಥಿಗಳಲ್ಲಿ ಒಬ್ಬರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ಅವರು 2006-7 ಮತ್ತು ನಂತರ 2018-19 ರವರೆಗೆ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಬಾರಿ, ಬಿಜೆಪಿ ಮತ್ತು ಜೆಡಿಎಸ್(ಎಸ್) ಒಟ್ಟಾಗಿ ಲೋಕಸಭೆ ಚುನಾವಣೆ ಎದುರಿಸಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ 19 ರಲ್ಲಿ ಗೆಲುವು ಸಾಧಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



