RSS ನಿಷ್ಠಾವಂತ, ಐದು ಬಾರಿಯ ಸಂಸದ ಪ್ರಲ್ಹಾದ್ ಜೋಶಿ ಮತ್ತೆ ಕೇಂದ್ರ ಸಚಿವರಾಗಿ ಪ್ರಮಾಣ
ಆರ್ಎಸ್ಎಸ್ ನಿಷ್ಠಾವಂತ ಮತ್ತು ಐದನೇ ಬಾರಿ ಸಂಸತ್ತಿಗೆ ಆಯ್ಕೆಯಾಗಿರುವ ಪ್ರಲ್ಹಾದ್ ಜೋಶಿ ಅವರು ಭಾನುವಾರ ಎನ್ಡಿಎ ಸರ್ಕಾರದಲ್ಲಿ ಎರಡನೇ ಬಾರಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನವದೆಹಲಿ: ಆರ್ಎಸ್ಎಸ್ ನಿಷ್ಠಾವಂತ ಮತ್ತು ಕರ್ನಾಟಕದ ಕೇಸರಿ ಪಕ್ಷದ ಭದ್ರಕೋಟೆಯಾದ ಧಾರವಾಡದಿಂದ ಐದನೇ ಬಾರಿ ಸಂಸತ್ತಿಗೆ ಆಯ್ಕೆಯಾಗಿರುವ ಪ್ರಲ್ಹಾದ್ ಜೋಶಿ ಅವರು ಭಾನುವಾರ ಎನ್ಡಿಎ ಸರ್ಕಾರದಲ್ಲಿ ಎರಡನೇ ಬಾರಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾತ್ರಿ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಲ್ಹಾದ್ ಜೋಶಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಹದಿನೆಂಟನೇಯವರಾಗಿ ಪ್ರಹ್ಲಾದ್ ಜೋಶಿ ಅವರು ದೇವರ ಹೆಸರಿನಲ್ಲಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಅವರ ಆಪ್ತರಾಗಿರುವ ಪ್ರಹ್ಲಾದ್ ಜೋಶಿ ಅವರು ಹಿಂದಿನ ಸಂಪುಟದಲ್ಲಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಖಾತೆಗಳನ್ನು ಹೊಂದಿದ್ದರು.
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ನ ವಿನೋದ್ ಅಸೋಟಿ ಅವರ ವಿರುದ್ಧ 97,324 ಮತಗಳ ಅಂತರದಿಂದ ಗೆದ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



