ದೇಶ

ಈ ಜನಾದೇಶದಿಂದ ಮೋದಿ ಸರ್ಕಾರದ ಧೋರಣೆ ಬದಲಾಗಲಿದೆ: ಸಚಿನ್ ಪೈಲಟ್

ಲೋಕಸಭೆ ಚುನಾವಣೆಯಲ್ಲಿ ಮತದಾರ ಯಾವುದೇ ಪಕ್ಷಕ್ಕೆ ಸ್ಪಷ್ಟ ಜನಾದೇಶ ನೀಡದ ಕಾರಣ ಬಿಜೆಪಿ ನೇತೃತ್ವದ ಹೊಸ ಎನ್‌ಡಿಎ ಸರ್ಕಾರದ ಧೋರಣೆ ಬದಲಾಗಲಿದೆ.

ಈ ಜನಾದೇಶದಿಂದ ಮೋದಿ ಸರ್ಕಾರದ ಧೋರಣೆ ಬದಲಾಗಲಿದೆ: ಸಚಿನ್ ಪೈಲಟ್
ಸಚಿನ್ ಪೈಲಟ್
Published On :

ಜೈಪುರ: ಲೋಕಸಭೆ ಚುನಾವಣೆಯಲ್ಲಿ ಮತದಾರ ಯಾವುದೇ ಪಕ್ಷಕ್ಕೆ ಸ್ಪಷ್ಟ ಜನಾದೇಶ ನೀಡದ ಕಾರಣ ಬಿಜೆಪಿ ನೇತೃತ್ವದ ಹೊಸ ಎನ್‌ಡಿಎ ಸರ್ಕಾರದ ಧೋರಣೆ ಬದಲಾಗಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಚಿನ್ ಪೈಲಟ್ ಅವರು ಸೋಮವಾರ ಹೇಳಿದ್ದಾರೆ.

ಇಂದು ಟೋಂಕ್ ನಲ್ಲಿ 'ಶಹೀದ್ ಸ್ಮಾರಕ'ವನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು, ಈ ಬಾರಿ ಮೋದಿ ಸರ್ಕಾರ "ನಿರಂಕುಶ" ರೀತಿಯಲ್ಲಿ ಕಾರ್ಯನಿರ್ವಹಿಸಲು ಪ್ರತಿಪಕ್ಷಗಳು ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ಸಚಿನ್ ಪೈಲಟ್, ಮೋದಿಯವರ ಮೂರನೇ ಅವಧಿಯು ಯಾವಾಗಲೂ ಇತರರ ಮೇಲೆ ಅವಲಂಬಿತವಾಗಿರುತ್ತದೆ. ಅವರು ಮತ್ತು ಅವರ ಪಕ್ಷ ಹೇಳಿಕೊಳ್ಳುತ್ತಿದ್ದ ಭಾರಿ ಜನಾದೇಶ ಬಂದಿಲ್ಲ. ಏಕೆಂದರೆ ಕಾಂಗ್ರೆಸ್ ಮತ್ತು ಇಂಡಿಯಾ ಬಣದ ಮಿತ್ರಪಕ್ಷಗಳು ಉತ್ತರ ಪ್ರದೇಶದಂತಹ ಕೇಸರಿ ಭದ್ರಕೋಟೆಯಲ್ಲಿ ಬಿಜೆಪಿಗೆ ಆಘಾತ ನೀಡಿವೆ ಎಂದರು.

"ಇದು ಸ್ಪಷ್ಟ ಜನಾದೇಶ ಅಲ್ಲ. ಯಾವುದೇ ಒಂದು ಪಕ್ಷಕ್ಕೆ ಸರ್ಕಾರ ರಚಿಸುವ ಜನಾದೇಶ ಬಂದಿಲ್ಲ. ಇದು ಮೈತ್ರಿ ಸರ್ಕಾರ. ಆದ್ದರಿಂದ ಕಳೆದ 10 ವರ್ಷಗಳಲ್ಲಿ ಇದ್ದ ಧೋರಣೆಯೊಂದಿಗೆ ಈ ಬಾರಿ ಕೆಲಸ ಮಾಡಲು ಸಾಧ್ಯವಿಲ್ಲ" ಎಂದು ಸಚಿನ್ ಪೈಲಟ್ ಟೋಂಕ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಭವಿಷ್ಯದಲ್ಲಿ ಏನಾಗಲಿದೆ ಎಂಬುದರ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ. ಆದರೆ ಎನ್‌ಡಿಎ ಸರ್ಕಾರದ ಧೋರಣೆ ಬದಲಾವಣೆಯಾಗಲಿದೆ ಎಂದು ಆರಂಭಿಕ ಸೂಚನೆಗಳು ತೋರಿಸುತ್ತವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.