ದೇಶ

3ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿಗೆ ಶುಭ ಕೋರಿದ ಪಾಕ್ ಪ್ರಧಾನಿ

ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಕೊನೆಗೂ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸೋಮವಾರ ಶುಭಾಶಯ ಕೋರಿದ್ದಾರೆ.

3ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿಗೆ ಶುಭ ಕೋರಿದ ಪಾಕ್ ಪ್ರಧಾನಿ
ಶೆಹಬಾಜ್ ಷರೀಫ್ - ನರೇಂದ್ರ ಮೋದಿ
Published On :

ನವದೆಹಲಿ: ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಕೊನೆಗೂ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸೋಮವಾರ ಶುಭಾಶಯ ಕೋರಿದ್ದಾರೆ. ತಮ್ಮನ್ನು ಅಭಿನಂದಿಸಿದ ಪಾಕ್ ಪ್ರಧಾನಿಗೆ ಮೋದಿ ಧನ್ಯವಾದ ಅರ್ಪಿಸಿದ್ದಾರೆ.

ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ನಂತರ ಸುಮಾರು 100 ದೇಶಗಳ ನಾಯಕರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಗೆಲುವಿಗೆ ಮೋದಿಯವರನ್ನು ಅಭಿನಂದಿಸಿದ್ದಾರೆ.

"ಇಂದು ನಿಮ್ಮ ಶುಭ ಹಾರೈಕೆಗಳಿಗಾಗಿ ಶೆಹಬಾಜ್ ಷರೀಫ್ ಅವರಿಗೆ ಧನ್ಯವಾದಗಳು" ಎಂದು X ನಲ್ಲಿ ಷರೀಫ್ ಅವರ ಸಂದೇಶಕ್ಕೆ ಪ್ರತ್ಯುತ್ತರವಾಗಿ ಮೋದಿ ಪೋಸ್ಟ್ ಹಾಕಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಿದ ಷರೀಫ್, "ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು" ಎಂದು ಹೇಳಿದ್ದಾರೆ.

ಭಾನುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭದಲ್ಲಿ ಭಾರತದ ನೆರೆಹೊರೆ ದೇಶಗಳ ಮತ್ತು ಹಿಂದೂ ಮಹಾಸಾಗರ ಪ್ರದೇಶದ ಏಳು ನಾಯಕರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.