ದೇಶ

ಒಡಿಶಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಮೋಹನ್ ಮಾಝಿ ನಾಳೆ ಪ್ರಮಾಣ ವಚನ

ಬಿಜೆಪಿ ನಾಯಕ ಮೋಹನ್ ಚರಣ್ ಮಾಝಿ ಅವರು ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಒಡಿಶಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಮೋಹನ್ ಮಾಝಿ ನಾಳೆ ಪ್ರಮಾಣ ವಚನ
ಮೋಹನ್ ಚರಣ್ ಮಾಝಿ
Published On :

ಭುವನೇಶ್ವರ: ಬಿಜೆಪಿ ನಾಯಕ ಮೋಹನ್ ಚರಣ್ ಮಾಝಿ ಅವರು ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಘೋಷಿಸಿದ್ದಾರೆ.

ಇಂದು ಭುವನೇಶ್ವರದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ 52 ವರ್ಷದ ಮಾಝಿ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು. ಈ ವೇಳೆ ರಾಜನಾಧ್ ಸಿಂಗ್, ಕೇಂದ್ರ ಸಚಿವರಾದ ಭೂಪೇಂದರ್ ಯಾದವ್ ಮತ್ತು ಧರ್ಮೇಂದ್ರ ಪ್ರಧಾನ್ ವೀಕ್ಷಕರಾಗಿ ಸಭೆಯಲ್ಲಿ ಭಾಗವಹಿಸಿದ್ದರು.

ಮೋಹನ್ ಮಾಝಿ ಅವರು ನಾಳೆ ಸಂಜೆ 5 ಗಂಟೆ ಒಡಿಶಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ ಬಿಜೆಪಿ ನಾಯಕರಾದ ಕೆವಿ ಸಿಂಘ್‌ದೇವ್ ಮತ್ತು ಪ್ರವತಿ ಪರಿದಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಭುವನೇಶ್ವರದ ಜನತಾ ಮೈದಾನದಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮಾಝಿ ಅವರು 2000, 2004, 2019 ಮತ್ತು 2024 ರಲ್ಲಿ ಕಿಯೋಂಜಾರ್ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ಈ ಹಿಂದೆ ಬಿಜೆಪಿಯ ಮುಖ್ಯ ಸಚೇತಕರಾಗಿ ಮತ್ತು ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.