ನಾಳೆ ಆಂಧ್ರ ಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಬುಧವಾರ ನಾಲ್ಕನೇ ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಅಮರಾವತಿ: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಬುಧವಾರ ನಾಲ್ಕನೇ ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ವಿಜಯವಾಡದ ಹೊರವಲಯದಲ್ಲಿರುವ ಕೆಸರಪಲ್ಲಿಯಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಎದುರಿನ ಮೇಧಾ ಐಟಿ ಪಾರ್ಕ್ ಬಳಿ ನಾಳೆ ಬೆಳಗ್ಗೆ 11.27ಕ್ಕೆ ಚಂದ್ರಬಾಬು ನಾಯ್ಡು ಅವರು ಆಂಧ್ರ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವರಾದ ಜೆ ಪಿ ನಡ್ಡಾ ಮತ್ತು ಬಂಡಿ ಸಂಜಯ್ ಕುಮಾರ್ ಸೇರಿದಂತೆ ಹಲವಾರು ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಇಂದು ರಾತ್ರಿಯೇ ಅಮರಾವತಿಗೆ ಆಗಮಿಸಲಿರುವ ಅಮಿತ್ ಶಾ ಅವರು ನಾಯ್ಡು ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದ್ದಾರೆ ಎಂದು ಎನ್‌ಡಿಎ ಮೂಲಗಳು ತಿಳಿಸಿವೆ.
ಟಿಡಿಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಚಂದ್ರಬಾಬು ನಾಯ್ಡು ಅವರು ಅಮರಾವತಿಯ ರಾಜಭವನದಲ್ಲಿ ರಾಜ್ಯಪಾಲ ಎಸ್ ಅಬ್ದುಲ್ ನಜೀರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ನಂತರ ಸಂಜೆ ಸರ್ಕಾರ ರಚಿಸಲು ನಾಯ್ಡುಗೆ ರಾಜ್ಯಪಾಲರು ಆಹ್ವಾನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



