ಪತಿ Instagram ಬಳಸಬೇಡ ಎಂದಿದ್ದಕ್ಕೇ ಮನ ನೊಂದ ಪತ್ನಿ ಆತ್ಮಹತ್ಯೆ!
ಮೊಬೈಲ್ ನಲ್ಲಿ Instagram ಬಳಕೆ ಮಾಡಬೇಡ ಎಂದು ಪತಿ ಹೇಳಿದ ಕಾರಣಕ್ಕೇ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ನೋಯ್ಡಾ: ಮೊಬೈಲ್ ನಲ್ಲಿ Instagram ಬಳಕೆ ಮಾಡಬೇಡ ಎಂದು ಪತಿ ಹೇಳಿದ ಕಾರಣಕ್ಕೇ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.
ನೋಯ್ಡಾದ ಸೆಕ್ಟರ್ 39 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಸದರ್‌ಪುರ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮಕ್ಕಳ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದರ್‌ಪುರ ಕಾಲೋನಿ ನಿವಾಸಿಯಾಗಿರುವ ಮಹಿಳೆ ಅತಿಯಾಗಿ ಇನ್‌ಸ್ಟಾಗ್ರಾಮ್ ಬಳಕೆ ಮಾಡುತ್ತಿದ್ದರು. Instagram ಅತಿಯಾಗಿ ಅಡಿಕ್ಟ್ ಆಗಿದ್ದರಿಂದ ಇದೇ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಜಗಳ ಕೂಡ ನಡೆಯುತ್ತಿತ್ತು.
ಸೋಮವಾರ ಈ ಜಗಳ ತಾರಕಕ್ಕೇರಿ ಪತಿ Instagram ಬಳಕೆ ಮಾಡದಂತೆ ಸೂಚಿಸಿದ್ದರಿಂದ ಮನನೊಂದ ಮಹಿಳೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ತಿಳಿದ ಸ್ಥಳೀಯ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕಾಗಮಿಸಿ ಸ್ಥಳವನ್ನು ಪರಿಶೀಲಿಸಿದೆ. ದಂಪತಿಗೆ ಒಂಬತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



