ಉತ್ತರ ಪ್ರದೇಶ: ಶಾಸಕ ಸ್ಥಾನಕ್ಕೆ ಅಖಿಲೇಶ್ ಯಾದವ್ ರಾಜೀನಾಮೆ
ಉತ್ತರ ಪ್ರದೇಶ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬುಧವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಲಖನೌ: 2022 ರಿಂದ ಉತ್ತರ ಪ್ರದೇಶ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬುಧವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕರ್ಹಾಲ್ ಕ್ಷೇತ್ರದ ಶಾಸಕರಾಗಿದ್ದ ಅಖಿಲೇಶ್ ಯಾದವ್ ಅವರು ಇತ್ತೀಚಿಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಕನೌಜ್ ಕ್ಷೇತ್ರದಿಂದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಖಿಲೇಶ್ ಯಾದವ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಅಸೆಂಬ್ಲಿ ಸ್ಪೀಕರ್ ಸತೀಶ್ ಮಹಾನಾ ಅವರಿಗೆ ರವಾನಿಸಿದ್ದಾರೆ.
ರಾಷ್ಟ್ರೀಯ ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿರುವ ಕನೌಜ್ ಸಂಸದ ಅಖಿಲೇಶ್ ಯಾದವ್ ಅವರು, ಲೋಕಸಭೆಯಲ್ಲಿ ಎಸ್ಪಿ ನಾಯಕರಾಗಲಿದ್ದಾರೆ.
ಏತನ್ಮಧ್ಯೆ, ಅಯೋಧ್ಯೆ ಸಂಸದರಾಗಿ ಆಯ್ಕೆಯಾದ ಮಿಲ್ಕಿಪುರದ ಹಾಲಿ ಶಾಸಕ ಅವಧೇಶ್ ಪ್ರಸಾದ್ ಕೂಡ ಬುಧವಾರ ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



