ಸತತ 3ನೇ ಅವಧಿಗೆ ಅರುಣಾಚಲ ಸಿಎಂ ಆಗಿ ಪೆಮಾ ಖಂಡು ಆಯ್ಕೆ: ಬಿಜೆಪಿ ಮೂಲಗಳು
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪುನರಾಯ್ಕೆಯಾಗಿರುವ ಪೆಮಾ ಖಂಡು ಅವರು ಸತತ ಮೂರನೇ ಅವಧಿಗೆ ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಲಿದ್ದಾರೆ.

ಇಟಾನಗರ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪುನರಾಯ್ಕೆಯಾಗಿರುವ ಪೆಮಾ ಖಂಡು ಅವರು ಸತತ ಮೂರನೇ ಅವಧಿಗೆ ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಮೂಲಗಳು ಬುಧವಾರ ತಿಳಿಸಿವೆ.
ಇಂದು ಇಟಾನಗರದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಖಂಡು ಅವರನ್ನು ಮತ್ತೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.
ಬಿಜೆಪಿಯ ಕೇಂದ್ರ ವೀಕ್ಷಕರಾದ ರವಿಶಂಕರ್ ಪ್ರಸಾದ್ ಮತ್ತು ತರುಣ್ ಚುಗ್ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಖಂಡು ಅವರು ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಮುಕ್ತಾಯಗೊಂಡ ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪೆಮಾ ಖಂಡು ನೇತೃತ್ವದ ಬಿಜೆಪಿ 60 ಸದಸ್ಯ ಬಲದ ವಿಧಾನಸಭೆಯಲ್ಲಿ 46 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



