ಜಿ7 ಶೃಂಗಸಭೆ: ಪ್ರಧಾನಿ ಮೋದಿ ನಾಳೆ ಇಟಲಿಗೆ ಪ್ರಯಾಣ
ಜೂನ್ 14 ರಂದು ನಡೆಯಲಿರುವ 50ನೇ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ಪ್ರಧಾನಮಂತ್ರಿಯ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ನಾಳೆ ಇಟಲಿಯ ಅಪುಲಿಯಾಕ್ಕೆ ತೆರಳಲಿದ್ದಾರೆ.

ನವದೆಹಲಿ: ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಟಲಿಗೆ ತೆರಳಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಕ್ವಾತ್ರಾ ಹೇಳಿದ್ದಾರೆ. ಜೂನ್ 9, ಭಾನುವಾರ ಅಧಿಕಾರ ಸ್ವೀಕರಿಸಿದ ನಂತರ ಪ್ರಧಾನಿಯವರ ಮೊದಲ ಅಂತಾರಾಷ್ಟ್ರೀಯ ಭೇಟಿ ಇದಾಗಿದೆ.
ಜೂನ್ 14 ರಂದು ನಡೆಯಲಿರುವ 50ನೇ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ಪ್ರಧಾನಮಂತ್ರಿಯ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ನಾಳೆ ಇಟಲಿಯ ಅಪುಲಿಯಾಕ್ಕೆ ತೆರಳಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಮಾಹಿತಿ ನೀಡಿದ್ದಾರೆ.
ಸತತ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಇದು ಪ್ರಧಾನ ಮಂತ್ರಿಯವರ ಮೊದಲ ಸಾಗರೋತ್ತರ ಪ್ರಯಾಣವಾಗಿದೆ. ಇದು ಜಿ-20ಶೃಂಗಸಭೆಯಲ್ಲಿ ಭಾರತದ ಪ್ರಮುಖ ವಿಷಯಗಳ ಕುರಿತು ಇತರ ವಿಶ್ವ ನಾಯಕರೊಂದಿಗೆ ಹಂಚಿಕೊಳ್ಳಲು ಅವಕಾಶ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



