ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯದ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಬಿಜೆಪಿ ಸರ್ಕಾರ!
ಒಡಿಶಾದ ಬಿಜೆಪಿ ಸರ್ಕಾರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಭುವನೇಶ್ವರ್: ಒಡಿಶಾದ ಬಿಜೆಪಿ ಸರ್ಕಾರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಪುನಃ ತೆರೆಯುವ ನಿರ್ಧಾರ ಇದಾಗಿದ್ದು, ಗುರುವಾರ ಬೆಳಿಗ್ಗೆಯಿಂದ ಜಾರಿಗೆ ಬಂದಿದೆ. ಇದಷ್ಟೇ ಅಲ್ಲದೇ ದೇವಾಲಯಕ್ಕೆ ಅಗತ್ಯವಿರುವ ಸಂಗ್ರಹ ನಿಧಿಯನ್ನು ಸ್ಥಾಪಿಸುವುದಕ್ಕೂ ಸಚಿವ ಸಂಪುಟ ಅನುಮೋದನೆ ನೀಡಿದೆ.
ಭಕ್ತಾದಿಗಳು ಇನ್ನು ಮುಂದೆ ಎಲ್ಲಾ ನಾಲ್ಕು ದ್ವಾರಗಳ ಮೂಲಕ ಪುರಿ ಜಗನ್ನಾಥನ ದರ್ಶನ ಪಡೆಯಬಹುದಾಗಿದೆ ಎಂದು ಸಿಎಂ ಮೋಹನ್ ಚರಣ್ ಮಾಜ್ಹಿ ಹೇಳಿದ್ದಾರೆ. ದೇವಾಲಯದ ನಾಲ್ಕೂ ದ್ವಾರಗಳನ್ನು ತೆರೆಯುವುದು ಬಿಜೆಪಿ ಪ್ರಣಾಳಿಕೆಯ ಅಂಶವಾಗಿತ್ತು. ಗೇಟ್ ಗಳನ್ನು ಮುಚ್ಚಿದ್ದರಿಂದ ಭಕ್ತಾದಿಗಳಿಗೆ ಅನನುಕೂಲವಾಗಿತ್ತು.
ಹಿಂದಿನ BJD ಆಡಳಿತವು COVID-19 ಸಾಂಕ್ರಾಮಿಕ ರೋಗದಿಂದ ದೇವಾಲಯದ ನಾಲ್ಕು ದ್ವಾರಗಳನ್ನು ಮುಚ್ಚುವುದನ್ನು ಮುಂದುವರೆಸಿತ್ತು. ಭಕ್ತರು ಒಂದು ಗೇಟ್ ಮೂಲಕ ಮಾತ್ರ ಪ್ರವೇಶಿಸಬಹುದಾಗಿತ್ತು. ಅನನುಕೂಲವಾಗುತ್ತಿದ್ದ ಕಾರಣ ಎಲ್ಲಾ ದ್ವಾರಗಳನ್ನು ತೆರೆಯಬೇಕು ಎಂಬ ಒತ್ತಾಯ ಕೇಳಿಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



