ದೇಶ

ಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ನಾಲ್ವರ ದುರ್ಮರಣ, 20 ಮಂದಿಗೆ ಗಾಯ

ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ನಾಲ್ವರು ದುರ್ಮರಣವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ನಾಲ್ವರ ದುರ್ಮರಣ, 20 ಮಂದಿಗೆ ಗಾಯ
ಅಪಘಾತ (ಸಾಂಕೇತಿಕ ಚಿತ್ರ) — online desk
Published On :

ದಾತಿಯಾ: ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ನಾಲ್ವರು ದುರ್ಮರಣವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ವ್ಯಕ್ತಿಗಳು ರತನ್‌ಗಢ ಮಾತಾ ದೇಗುಲಕ್ಕೆ ತೆರಳುತ್ತಿದ್ದಾಗ ಮೈಥಾನ ಪಾಲಿ ಬಳಿ ಬೆಳಿಗ್ಗೆ 4.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತಕ್ಕೀಡಾದ ವಾಹನವು ರಸ್ತೆಯಿಂದ 15 ಅಡಿ ಎತ್ತರದ ಮೋರಿಗೆ ಉರುಳಿಬಿದ್ದಿದ್ದು, ಪರಿಣಾಮ ಇಬ್ಬರು ಬಾಲಕಿಯರು ಹಾಗೂ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.