ದೇಶ

ತಮಿಳುನಾಡು: ಭಿನ್ನಾಭಿಪ್ರಾಯದ ವದಂತಿ ಬೆನ್ನಲ್ಲೆ ತಮಿಳಿಸೈ ಸೌಂದರರಾಜನ್ ಭೇಟಿ ಮಾಡಿದ ಅಣ್ಣಾಮಲೈ!

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಶುಕ್ರವಾರ ಚೆನ್ನೈನಲ್ಲಿ ಪಕ್ಷದ ಹಿರಿಯ ನಾಯಕಿ ತಮಿಳಿಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿದ್ದಾರೆ.

ತಮಿಳುನಾಡು: ಭಿನ್ನಾಭಿಪ್ರಾಯದ ವದಂತಿ ಬೆನ್ನಲ್ಲೆ ತಮಿಳಿಸೈ ಸೌಂದರರಾಜನ್ ಭೇಟಿ ಮಾಡಿದ ಅಣ್ಣಾಮಲೈ!
ತಮಿಳಿಸೈ ಸೌಂದರರಾಜನ್, ಅಣ್ಣಾಮಲೈ
Published On :

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಶುಕ್ರವಾರ ಚೆನ್ನೈನಲ್ಲಿ ಪಕ್ಷದ ಹಿರಿಯ ನಾಯಕಿ ತಮಿಳಿಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿದ್ದಾರೆ. ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅಣ್ಣಾಮಲೈ ಫೋಸ್ಟ್ ಮಾಡಿದ್ದು, ಈ ಹಿಂದೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷೆಯಾಗಿ ಉತ್ತಮವಾಗಿ ಕೆಲಸ ಮಾಡಿದ ಡಾ.ತಮಿಳಿಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿದದ್ದು ನನಗೆ ಸಂತೋಷ ನೀಡಿದೆ. ಅವರ ರಾಜಕೀಯ ಅನುಭವ ಮತ್ತು ಸಲಹೆಗಳು ಪಕ್ಷದ ಬೆಳವಣಿಗೆಗೆ ಸ್ಪೂರ್ತಿ ನೀಡುತ್ತಲೇ ಇರುತ್ತವೆ ಎಂದು ಬರೆದುಕೊಂಡಿದ್ದಾರೆ.

ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಸಾಮಾಜಿಕ ಮಾಧ್ಯಮದಲ್ಲಿ ಸೌಂದರರಾಜನ್ ಮತ್ತು ಅಣ್ಣಾಮಲೈ ಬೆಂಬಲಿಗರ ನಡುವೆ ಟೀಕಾ ಪ್ರಹಾರ ನಡೆದಿತ್ತು. ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹಿರಿಯ ನಾಯಕ ಮತ್ತು ಗೃಹ ಸಚಿವ ಅಮಿತ್ ಶಾ, ವೇದಿಕೆಯಲ್ಲಿಯೇ ಸೌಂದರರಾಜನ್ ತರಾಟೆಗೆ ತೆಗೆದುಕೊಂಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಸೌಂದರರಾಜನ್, 2024 ರ ಚುನಾವಣೆಯ ನಂತರ ಮೊದಲ ಬಾರಿಗೆ ಗೃಹ ಸಚಿವ ಅಮಿತ್ ಶಾ ಅವರನ್ನು ನಿನ್ನೆ ಆಂಧ್ರಪ್ರದೇಶದಲ್ಲಿ ಭೇಟಿಯಾದಾಗ ಚುನಾವಣೆ ನಂತರ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಹೇಳಲು ತಿಳಿಸಿದರು.'ಸಮಯದ ಕೊರತೆಯ ಕಾರಣದಿಂದ ನಾನು ವಿವರಿಸುತ್ತಿರುವಾಗ, ರಾಜಕೀಯ ಮತ್ತು ಕ್ಷೇತ್ರದ ಕೆಲಸಗಳನ್ನು ತೀವ್ರವಾಗಿ ನಿರ್ವಹಿಸುವಂತೆ ಸಲಹೆ ನೀಡಿದರು. ಇದು ಎಲ್ಲಾ ಅನಗತ್ಯ ಊಹಾಪೋಹಗಳಿಗೆ ಸ್ಪಷ್ಟೀಕರಣವಾಗಿದೆ,' ಎಂದು ಅವರು ಹೇಳಿದ್ದಾರೆ.

ಸೌಂದರರಾಜನ್ ಅವರು ದಕ್ಷಿಣ ಚೆನ್ನೈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅವರು ಚುನಾವಣೆಯಲ್ಲಿ ಡಿಎಂಕೆಯ ತಮಿಳಚಿ ತಂಗಪಾಂಡಿಯನ್ ವಿರುದ್ಧ ಸೋತಿದ್ದರು. ಎಎಎಡಿಎಂಕೆ ಜೊತೆಗೆ ಜೊತೆ ಮೈತ್ರಿ ಮಾಡಿಕೊಂಡಿದ್ದರೆ ಪಕ್ಷ ಗೆಲ್ಲುತ್ತಿತ್ತು' ಎಂಬ ಆಕೆಯ ಹೇಳಿಕೆಯನ್ನು ಅಣ್ಣಾಮಲೈ ಅವರ ಬೆಂಬಲಿಗರು ವಿರೋಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.