ದೇಶ

ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಿಂದ ಕುವೈತ್ ನಿಂದ ಮೃತದೇಹಗಳನ್ನು ತರಲು ಸಾಧ್ಯವಾಯಿತು: ಕೇರಳ ಸಿಎಂ ಪಿಣರಾಯಿ ವಿಜಯನ್

ಕುವೈತ್‌ನಲ್ಲಿ ಅಗ್ನಿ ಅವಘಡದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿ ಇಂದು ಶುಕ್ರವಾರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಿಂದ ಕುವೈತ್ ನಿಂದ ಮೃತದೇಹಗಳನ್ನು ತರಲು ಸಾಧ್ಯವಾಯಿತು: ಕೇರಳ ಸಿಎಂ ಪಿಣರಾಯಿ ವಿಜಯನ್
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕುವೈತ್ ಬೆಂಕಿಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ಹೊತ್ತೊಯ್ದು ತಂದ ಶವಪೆಟ್ಟಿಗೆಗೆ ಹೂವಿನ ಹಾರ ಹಾಕಿ ಗೌರವಿಸಿದರು.
Published On :

ಕೊಚ್ಚಿ: ಕುವೈತ್‌ನಲ್ಲಿ ಅಗ್ನಿ ಅವಘಡದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿ ಇಂದು ಶುಕ್ರವಾರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನ ಇಂದು ಬೆಳಗ್ಗೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು.

ಗುರುವಾರ ಕುವೈತ್‌ಗೆ ಧಾವಿಸಿದ ಕೇಂದ್ರ ರಾಜ್ಯ ಸಚಿವ ಸಿಂಗ್ ವಿಕೆ ಸಿಂಗ್ ಮೃತದೇಹಗಳನ್ನು ಹೊತ್ತ ವಿಮಾನದಲ್ಲಿ ಆಗಮಿಸಿದರು. ಕೇಂದ್ರ ಸಚಿವ ಸುರೇಶ್ ಗೋಪಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವರು ವಿಮಾನ ನಿಲ್ದಾಣದಲ್ಲಿ ಭಾವಪೂರ್ಣವಾಗಿ ಬರಮಾಡಿಕೊಂಡರು. ಸಚಿವರಾದ ವೀಣಾ ಜಾರ್ಜ್, ಪಿ ರಾಜೀವ್, ಕೆ ರಾಜನ್ ಮತ್ತು ರೋಶಿ ಆಗಸ್ಟಿನ್ ಕೂಡ ಪಾರ್ಥಿವ ಶರೀರವನ್ನು ಸ್ವೀಕರಿಸಲು ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.

ಕುಟುಂಬಸ್ಥರಿಗೆ ಹಸ್ತಾಂತರಿಸಿದ ನಂತರ ಮಾತನಾಡಿದ ಸಿಎಂ ಪಿಣರಾಯಿ ವಿಜಯನ್, ಮೃತಪಟ್ಟ ಭಾರತೀಯರ ಮೃತಶರೀರಗಳನ್ನು ತರೆತರಲು ಭಾರತ ಸರ್ಕಾರ ಮತ್ತು ಕುವೈತ್‌ನ ಮಧ್ಯಸ್ಥಿಕೆ ಸಹಾಯ ಮಾಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಮೃತಪಟ್ಟವರ ಕುಟುಂಬಗಳಿಗೆ ಇದು ತುಂಬಲಾರದ ನಷ್ಟವಾಗಿದೆ. ಕುವೈತ್ ಸರ್ಕಾರವು ಪರಿಣಾಮಕಾರಿ ಮತ್ತು ನಿಷ್ಪಾಪ ಕ್ರಮಗಳನ್ನು ತೆಗೆದುಕೊಂಡಿದೆ, ದುರಂತದ ಬಗ್ಗೆ ತಿಳಿದಾಗ, ಭಾರತ ಸರ್ಕಾರವೂ ಸರಿಯಾದ ಸಮಯದಲ್ಲಿ ಸೂಕ್ತ ಕ್ರಮ ಕೈಗೊಂಡಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.