ಛತ್ತೀಸ್ಗಢ: ಎನ್ಕೌಂಟರ್ನಲ್ಲಿ 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ
ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ ಎಂಟು ನಕ್ಸಲರ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಮತ್ತಿಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ ಎಂಟು ನಕ್ಸಲರ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಮತ್ತಿಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ ನಾಲ್ಕು ಜಿಲ್ಲೆಗಳ ಭದ್ರತಾ ಸಿಬ್ಬಂದಿ ನಡೆಸಿದ ಜಂಟಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮದ್ ಅರಣ್ಯದಲ್ಲಿ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ರಾಯ್ಪುರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ. ಗುಂಡಿನ ಚಕಮಕಿಯಲ್ಲಿ ಈವರೆಗೆ ಎಂಟು ನಕ್ಸಲರು ಹತ್ಯೆಯಾಗಿದ್ದಾರೆ. ಇದೇ ವೇಳೆ ಒರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.
ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಪಡೆ (ಡಿಆರ್ಜಿ), ವಿಶೇಷ ಕಾರ್ಯಪಡೆ (ಎಸ್ಟಿಎಫ್) ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೋಲೀಸ್ (ಐಟಿಬಿಪಿ) 53ನೇ ಬೆಟಾಲಿಯನ್ನ ಸಿಬ್ಬಂದಿಯನ್ನು ಒಳಗೊಂಡ ಕಾರ್ಯಾಚರಣೆಯನ್ನು ಜೂನ್ 12 ರಂದು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.
ಈ ಸಂಬಂಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



