ರಿಷಿಕೇಶ-ಬದ್ರಿನಾಥ್ ಹೆದ್ದಾರಿಯಿಂದ ಕಮರಿಗೆ ಉರುಳಿದ ಟೆಂಪೋ; 12 ಮಂದಿ ಸಾವು
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಬದರಿನಾಥ್ ಹೆದ್ದಾರಿಯಲ್ಲಿ ಶನಿವಾರ ಟೆಂಪೋ ಟ್ರಾವೆಲರೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ ಹನ್ನೆರಡು ಜನ ಸಾವನ್ನಪ್ಪಿದ್ದಾರೆ.

ರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಬದರಿನಾಥ್ ಹೆದ್ದಾರಿಯಲ್ಲಿ ಶನಿವಾರ ಟೆಂಪೋ ಟ್ರಾವೆಲರೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ ಹನ್ನೆರಡು ಜನ ಸಾವನ್ನಪ್ಪಿದ್ದಾರೆ ಮತ್ತು ಹತ್ತು ಮಂದಿ ಗಾಯಗೊಂಡಿದ್ದಾರೆ.
ಟೆಂಪೋ ಟ್ರಾವೆಲರ್ ಜನಪ್ರಿಯ ಪ್ರವಾಸಿ ತಾಣವಾದ ಚೋಪ್ಟಾಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, "ರುದ್ರಪ್ರಯಾಗ ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಅಪಘಾತವಾದ ದುಃಖದ ಸುದ್ದಿ ಬಂದಿದೆ. ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದರು.
ಈ ಘಟನೆಯ ಕುರಿತು ತನಿಖೆ ನಡೆಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಆದೇಶ ನೀಡಲಾಗಿದಿ ಎಂದು ಪುಷ್ಕರ್ ಸಿಂಗ್ ಧಾಮಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



