ದೆಹಲಿಯಲ್ಲಿ ನೀರಿನ ಸಮಸ್ಯೆ: ಕೇಂದ್ರ ಮಧ್ಯಸ್ಥಿಕೆ ವಹಿಸಬೇಕೆಂದು ಎಎಪಿ ಶಾಸಕರ ಆಗ್ರಹ
ನೀರಿನ ಸಮಸ್ಯೆ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಆಮ್ ಆದ್ಮಿ ಪಕ್ಷದ ಶಾಸಕರು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ತೀವ್ರ ಬಿಸಿಲಿನ ನಡುವೆ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಈ ಸಮಸ್ಯೆ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಆಮ್ ಆದ್ಮಿ ಪಕ್ಷದ ಶಾಸಕರು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ದೆಹಲಿ ಪರಿಸ್ಥಿತಿ 'ತುಂಬಾ ನಿರ್ಣಾಯಕ'ವಾಗಿದೆ ಎಂದ ದೆಹಲಿ ವಿಧಾನಸಭೆಯ ಎಎಪಿ ಮುಖ್ಯ ಸಚೇತಕ ದಿಲೀಪ್ ಪಾಂಡೆ, ಯಮುನಾ ನೀರಿನ ಸಮಸ್ಯೆ ಅಂತರರಾಜ್ಯ ಸಮಸ್ಯೆಯಾಗಿದ್ದು, ಇದಕ್ಕೆ ಜಲಶಕ್ತಿ ಸಚಿವಾಲಯದ ಸಮನ್ವಯತೆಯ ಅಗತ್ಯವಿದೆ ಎಂದು ಹೇಳಿದರು.
ಎಎಪಿ ಶಾಸಕರು ತಮ್ಮ ಪತ್ರದಲ್ಲಿ ನೀರಿನ ಸಮಸ್ಯೆ ಬಗ್ಗೆ ಚರ್ಚಿಸಲು ಜಲಶಕ್ತಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಲಾಗಿದೆ ಎಂದು ಪಾಂಡೆ ತಿಳಿಸಿದ್ದಾರೆ.
ನೀರಿನ ವಿಚಾರದಲ್ಲಿ ರಾಜಕೀಯ ಮಾಡುವ ಬದಲು, ನೀರಿನ ಬಿಕ್ಕಟ್ಟನ್ನು ಪರಿಹರಿಸಲು ಮತ್ತು ದೆಹಲಿಯ ಜನರಿಗೆ ನೀರು ನೀಡಲು ಎಲ್ಲಾ ಪಕ್ಷಗಳು ಶ್ರಮಿಸಬೇಕು ಎಂದು ಪಾಂಡೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ದೆಹಲಿಗೆ ಯಮುನಾ ನದಿ ನೀರಿನ ಪಾಲನ್ನು ಬಿಜೆಪಿ ಆಡಳಿತವಿರು ಹರಿಯಾಣ ಸರ್ಕಾರ ನೀಡುತ್ತಿಲ್ಲ ಎಂದು ಆಡಳಿತಾರೂಢ ಎಎಪಿ ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



