ಗಂಗಾ ನದಿಯಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಪಲ್ಟಿ: 6 ಮಂದಿ ನಾಪತ್ತೆ
17 ಮಂದಿ ಪ್ರಯಾಣಿಸುತ್ತಿದ್ದ ದೋಣಿಯೊಂದು ಗಂಗಾ ನದಿಯಲ್ಲಿ ಪಲ್ಟಿಯಾಗಿದೆ. ಬಿಹಾರದ ರಾಜಧಾನಿ ಪಾಟ್ನಾದ ಬಾರ್ಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಅದೃಷ್ಟವಶಾತ್ 11 ಮಂದಿ ಈಡಿ ದಡ ಸೇರಿದ್ದರೆ ಆರು ಮಂದಿ ನಾಪತ್ತೆಯಾಗಿದ್ದಾರೆ.

ಪಾಟ್ನಾ: 17 ಮಂದಿ ಪ್ರಯಾಣಿಸುತ್ತಿದ್ದ ದೋಣಿಯೊಂದು ಗಂಗಾ ನದಿಯಲ್ಲಿ ಪಲ್ಟಿಯಾಗಿದೆ. ಬಿಹಾರದ ರಾಜಧಾನಿ ಪಾಟ್ನಾದ ಬಾರ್ಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಅದೃಷ್ಟವಶಾತ್ 11 ಮಂದಿ ಈಡಿ ದಡ ಸೇರಿದ್ದರೆ ಆರು ಮಂದಿ ನಾಪತ್ತೆಯಾಗಿದ್ದಾರೆ.
ನದಿ ಮಧ್ಯೆಯಲ್ಲಿ ದೋಣಿ ಮುಳುಗಿದ್ದು ತಕ್ಷಣ ಎಲ್ಲರೂ ನದಿಯಲ್ಲಿ ಮುಳುಗಲು ಪ್ರಾರಂಭಿಸಿದರು. ಇಂತರ ಸಂದರ್ಭದಲ್ಲೂ ಹೇಗೋ 11 ಜನ ಈಜಿ ದಡ ಸೇರಿದ್ದರೆ ಇನ್ನೂ ಆರು ಮಂದಿ ನಾಪತ್ತೆಯಾಗಿದ್ದಾರೆ.
ಗಂಗಾ ದಸರಾ ನಿಮಿತ್ತ ಕೆಲವರು ಸ್ನಾನ ಮಾಡಲು ನದಿಗೆ ಅಡ್ಡಲಾಗಿ ದೋಣಿಯಲ್ಲಿ ಹೋಗುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ವೇಳೆ ಉಮಾ ಘಾಟ್ ಬಳಿ ದೋಣಿ ಪಲ್ಟಿಯಾಗಿದೆ. ದುರಂತದಲ್ಲಿ ಆರು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡ ಸ್ಥಳಕ್ಕೆ ತಲುಪಿದೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಹಲವು ಜಿಲ್ಲೆಗಳಿಂದ ಗಂಗಾಸ್ನಾನಕ್ಕೆ ಆಗಮಿಸುವ ಪ್ರಸಿದ್ಧ ಉಮಾನಾಥ ಘಾಟ್‌ನಲ್ಲಿ ಪೊಲೀಸ್ ಆಡಳಿತ ಯಾವುದೇ ವ್ಯವಸ್ಥೆ ಮಾಡಿಲ್ಲ ಅಥವಾ ಸಾಕಷ್ಟು ಪೊಲೀಸರನ್ನು ನಿಯೋಜಿಸಿಲ್ಲ ಎಂದು ಆರೋಪಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



