ಕೋಟಾ: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ; ಈ ವರ್ಷದಲ್ಲಿ 11ನೇ ಪ್ರಕರಣ
ಐಐಟಿ-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಯುವಕ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಜೈಪುರ: ಐಐಟಿ-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಯುವಕ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಬಿಹಾರದ ಮೋತಿಹಾರಿ ನಿವಾಸಿ ಆಯುಷ್ ಜೈಸ್ವಾಲ್ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ಮಹಾವೀರ್ ನಗರ ಪ್ರದೇಶದ ಸಾಮ್ರಾಟ್ ಚೌಕ್ ಬಳಿಯ ಪೇಯಿಂಗ್ ಗೆಸ್ಟ್‌ಹೌಸ್‌ನಲ್ಲಿ ತಂಗಿದ್ದರು.
ಶನಿವಾರ ರಾತ್ರಿಯಾದರೂ ಕೊಠಡಿಯಿಂದ ಹೊರಗೆ ಬಾರದಿದ್ದಾಗ ಆತನ ಸ್ನೇಹಿತರು ಪೇಯಿಂಗ್ ಗೆಸ್ಟ್ ಹೌಸ್ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
'ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಆತನ ಕುಟುಂಬ ಸದಸ್ಯರು ಇಲ್ಲಿಗೆ ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು' ಎಂದು ಮಹಾವೀರ್ ನಗರ ಎಸ್‌ಎಚ್‌ಒ ಮಹೇಂದ್ರ ಮಾರು ತಿಳಿಸಿದ್ದಾರೆ.
ವಿದ್ಯಾರ್ಥಿ ಬಾಗಿಲು ತೆರೆಯದಿದ್ದಾಗ ಪೇಯಿಂಗ್ ಗೆಸ್ಟ್ ಹೌಸ್ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ತಂಡ ಬಾಗಿಲ ಬೀಗ ಒಡೆದು ನೋಡಿದಾಗ ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಪೊಲೀಸರು ಆತನನ್ನು ಕೆಳಗಿಳಿಸಿ ಹೊಸ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಈ ವರ್ಷದ ಜನವರಿಯಿಂದ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿತ 11ನೇ ಪ್ರಕರಣ ಇದಾಗಿದ್ದು, ಕಳೆದ ವರ್ಷ 26 ಶಂಕಿತ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



