ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ: 19 ರೈಲುಗಳ ಸೇವೆ ರದ್ದು
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಕನಿಷ್ಠ 15 ಜನರ ಸಾವಿಗೆ ಕಾರಣವಾದ ಕಾಂಚನಜುಂಗಾ ರೈಲು ಅಪಘಾತದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಸುಮಾರು 19 ರೈಲು ಗಳ ಸೇವೆಯನ್ನು ಭಾರತೀಯ ರೈಲ್ವೇ ಇಲಾಖೆ ರದ್ದುಗೊಳಿಸಿದೆ.

ನವದೆಹಲಿ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಕನಿಷ್ಠ 15 ಜನರ ಸಾವಿಗೆ ಕಾರಣವಾದ ಕಾಂಚನಜುಂಗಾ ರೈಲು ಅಪಘಾತದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಸುಮಾರು 19 ರೈಲು ಗಳ ಸೇವೆಯನ್ನು ಭಾರತೀಯ ರೈಲ್ವೇ ಇಲಾಖೆ ರದ್ದುಗೊಳಿಸಿದೆ.
ಹೌದು.. ನ್ಯೂ ಜಲ್ಪೈಗುರಿ, ಸಿಲಿಗುರಿ ಜಂಕ್ಷನ್, ಬಾಗ್ಡೋಗ್ರಾ ಮತ್ತು ಅಲುಬಾರಿ ರಸ್ತೆ ಮಾರ್ಗಗಳಲ್ಲಿ ಸಂಚರಿಸಬೇಕಿದ್ದ ಸುಮಾರು 19 ರೈಲುಗಳ ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ರೇಲ್ವೇ ಇಲಾಖೆ ಮೂಲಗಳು ತಿಳಿಸಿವೆ.
ಬೆಳಗ್ಗೆ 8:55 ರ ಸುಮಾರಿಗೆ ನಿಂತಿದ್ದ 13174 ಅಗರ್ತಲಾ - ಸೀಲ್ದಾ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಸರಕು ಸಾಗಾಣಿಕಾ ಗೂಡ್ಸ್ ರೈಲು ಡಿಕ್ಕಿ ಹೊಡೆದು, ಪ್ರಯಾಣಿಕ ರೈಲಿನ ನಾಲ್ಕು ಹಿಂದಿನ ಕೋಚ್‌ಗಳು ಮತ್ತು ಸರಕು ರೈಲಿನ ಐದು ಬೋಗಿಗಳು ಹಳಿತಪ್ಪಿದವು. ಪರಿಣಾಮ ಎಕ್ಸ್ ಪ್ರೆಸ್ ರೈಲಿನಲ್ಲಿದ್ದ ಪ್ರಯಾಣಿಕರ ಪೈಕಿ 15 ಮಂದಿ ಸಾವಿಗೀಡಾಗಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಭಾರತೀಯ ರೈಲ್ವೇ ಇಲಾಖೆ ಈ ಪ್ರದೇಶದಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಿದ್ದು, ಇದು ಉತ್ತರ ಬಂಗಾಳ ಮತ್ತು ದೇಶದ ಈಶಾನ್ಯ ಭಾಗದಿಂದ ದೂರದ ರೈಲು ಸೇವೆಗಳ ಮೇಲೆ ಪರಿಣಾಮ ಬೀರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



